Menu

ಜನಗಣತಿ ಸಮೀಕ್ಷೆಗೆ ಗೈರು: 11 ಶಿಕ್ಷಕರ ಅಮಾನತು

ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಗೈರುಹಾಜರಾಗಿ ಕರ್ತವ್ಯಲೋಪ ಎಸಗಿರುವ ಆಧಾರದಲ್ಲಿ ಇದುವರೆಗೂ 11 ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಎಂಟು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರಿನಲ್ಲಿ ಒಬ್ಬ ಶಿಕ್ಷಕಿಯನ್ನು ಅಮಾನತುಗೊಳಿಸಿ ಬೆಂಗಳೂರು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಾದನಾಯಕನಹಳ್ಳಿ ಮುಖ್ಯ ಶಿಕ್ಷಕಿ ಸೌಭಾಗ್ಯ ಅವರನ್ನು ಕರ್ತವ್ಯ ಲೋಪ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ. ಅಕ್ಟೋಬರ್ 7ಕ್ಕೆ ಅಂತಿಮ‌ ದಿನವಾಗಿರುವ ಕಾರಣ ಅಧಿಕಾರಿಗಳು ಸಮೀಕ್ಷೆಯನ್ನು ಮುಗಿಸುವ ಭರದಲ್ಲಿದ್ದಾರೆ. ರಾಜ್ಯ ಹಿಂದುಳಿದ