Tuesday, September 22, 2026
Menu

ಐದು ವರ್ಷ ನಾನೇ ಸಿಎಂ ಎಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ ಎಂದ ಸಿದ್ದರಾಮಯ್ಯ

140 ಶಾಸಕರು ನಮ್ಮೊಂದಿಗಿದ್ದಾರೆ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ . 2023 ರಂತೆ 2028 ರಲ್ಲಿಯೂ ಜನಾರ್ಶೀವಾದ ದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ, ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದ ಸಿಎಂ,  “‘ನಾನು’ ಹೋದರೆ ಹೋದೇನು”

ಶಾಸಕ ಇಕ್ಬಾಲ್ ಮಾತು ಗಂಭೀರವಾಗಿ ಪರಿಗಣಿಸಬೇಡಿ, ಚಟಕ್ಕೆ ಮಾತನಾಡುತ್ತಾನೆ ಎಂದ ಡಿಸಿಎಂ

ಶಾಸಕ ಇಕ್ಬಾಲ್  ಹುಸೇನ್‌ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ, ಯಾರೂ  ಅವರ ಮಾತನ್ನು ಗಣನೆಗೆ ತೆಗೆದುಕೊಳ್ಳುವುದು ಬೇಡ. ಆತ ಚಟಕ್ಕೆ ಮಾತನಾಡುತ್ತಾನೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಡಿಸೆಂಬರ್ ನಲ್ಲಿ ಶಿವಕುಮಾರ್ ಅವರು ಸಿಎಂ ಆಗುತ್ತಾರೆ ಎಂಬ ಶಾಸಕ ಇಕ್ಬಾಲ್ ಹುಸೇನ್ ಅವರ

ಯತೀಂದ್ರ ಸಿಎಂ ಬದಲಾವಣೆ ಹೇಳಿಕೆ ಕೊಡಬಾರದಿತ್ತು: ಶಾಸಕ ನಂಜೇಗೌಡ

ಯತೀಂದ್ರ ಸಿದ್ದರಾಮಯ್ಯ ಆರಾಮವಾಗಿ ಇರಬೇಕು ಅಷ್ಟೇ,  ಅಧಿಕಾರ ಹಂಚಿಕೆ ವಿಚಾರವಾಗಿ ಇಂತಹ ಹೇಳಿಕೆ ಕೊಡಬಾರದಿತ್ತು. ಸಿದ್ದರಾಮಯ್ಯ ರಾಜ್ಯದ ನಾಯಕ, ಅವಕಾಶ ಸಿಕ್ಕಿದರೆ ರಾಷ್ಟ್ರೀಯ ನಾಯಕರೂ ಆಗಬಹುದು ಎಂದು ಶಾಸಕ ಕೆವೈ ನಂಜೇಗೌಡ ಹೇಳಿದರು ಕೋಲಾರದ   ಬೆಳಗಾನಹಳ್ಳಿಯಲ್ಲಿರುವ ಹಾಲು ಒಕ್ಕೂಟದ ಕಚೇರಿಯಲ್ಲಿ ಮಾತನಾಡಿದ

ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿಕೆ ಶಿವಕುಮಾರ್‌ ಸಿಎಂ: ಇಕ್ಬಾಲ್ ಹುಸೇನ್

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಮುಗಿದ ಕೂಡಲೇ ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಗುರುವಾರ ಶಿವಕುಮಾರ್‌ ಬಣದ ಡಿನ್ನರ್​​ ಮೀಟಿಂಗ್​ ಬಗ್ಗೆ ಪ್ರತಿಕ್ರಿಯಿಸಿ,​ ಪ್ರೀತಿ ವಿಶ್ವಾಸಕ್ಕಾಗಿ

ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್‌ ಹೇಳಿದ್ರೆ ಮಾತ್ರ ಬದಲಾವಣೆ: ಗಣಿಗ ರವಿಕುಮಾರ್

ಒಂದೆಡೆ ಊಟಕ್ಕೆ ಸೇರಿದ ತಕ್ಷಣ ನಾಯಕತ್ವ ಬದಲಾವಣೆಗೆ ಅಂದ್ರೆ ಹೇಗೆ. ಊಟಕ್ಕೆ ಸೇರಿದರೆ ಸಿಎಂ ಬದಲಾಗಲ್ಲ, ಹೈಕಮಾಂಡ್‌ ಹೇಳಿದ್ರೆ ಮಾತ್ರ ಬದಲಾವಣೆ ಎಂದು ಮಂಡ್ಯದಲ್ಲಿ ಕಾಂಗ್ರೆಸ್‌ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಜ್ಯ ನಾಯಕತ್ವ ಬದಲಾವಣೆ ವಿಚಾರದಲ್ಲಿ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್‌ ಸ್ಪಷ್ಟಪಡಿಸಿದೆ: ಯತೀಂದ್ರ

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಒಂದು ಮಟ್ಟಿಗೆ ತಣ್ಣಗಾಗಿದ್ದರೂ ಸಿಎಂ ಸಿದ್ದರಾಮಯ್ಯ ಅವರ ಮಗ, ವಿಧಾನಪರಿಷತ್‌ ಸದಸ್ಯ ಯತೀಂದ್ರ ಅವರು ಬೂದಿ ಮುಚ್ಚಿರುವ ಕೆಂಡಕ್ಕೆ ಗಾಳಿ ಹಾಕಿ ಉರಿಸುವ ಕೆಲಸ ಮುಂದುವರಿಸಿದ್ದಾರೆ. ಬೆಳಗಾವಿಯಲ್ಲಿ ಅವರು  ಮುಖ್ಯಮಂತ್ರಿ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆ

ಸಿಎಂ ಬದಲಾವಣೆ: ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ ಅಂದ್ರು ಡಿಸಿಎಂ

ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧ ಹಾಗೂ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಐದು ವರ್ಷ

ಸಿಎಂ ಬದಲಾವಣೆ: ಸರಿಯಾದ ಸಮಯದಲ್ಲಿ  ಹೈಕಮಾಂಡ್ ಸೂಕ್ತ ನಿರ್ಧಾರವೆಂದ ಡಿಕೆ ಸುರೇಶ್

“ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು, ಒಂದು ಹಂತಕ್ಕೆ ಬರಲಿದೆ. “ಹೈಕಮಾಂಡ್ ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ” ಎಂದು ಬಮೂಲ್ ಅಧ್ಯಕ್ಷ ಡಿಕೆ ಸುರೇಶ್ ಹೇಳಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಪ್ರತಿಕ್ರಿಯೆ ನೀಡಿದರು. ಸಿಎಂ ಬದಲಾವಣೆ ವಿಚಾರವಾಗಿ ನೀವು

ನನ್ನ, ಸಿಎಂ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಡಿಕೆ ಶಿವಕುಮಾರ್ ಪುನರುಚ್ಚಾರ

“ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ” ಡಿಸಿಎಂ ಡಿಕೆ ಶಿವಕುಮಾರ್ ಅವರು ಪುನರುಚ್ಚರಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. ನಿಮ್ಮ ಹಾಗೂ ಸಿಎಂ ಉಪಹಾರ ಸಭೆ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಹೊಸ

ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ: ಡಿಕೆ ಶಿವಕುಮಾರ್

ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು  ಹೇಳಿದ್ದಾರೆ. ಅವರು ವಿಧಾನಸೌಧದ ಬಳಿ ಕೇಳಿದಾಗ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದಿಲ್ಲಿಗೆ ಕರೆದು ಚರ್ಚೆ ಮಾಡುತ್ತೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ