Karnataka CM post
ಡಿಕೆ ಶಿವಕುಮಾರ್‌ಗೆ ಸಿಎಂ ಆಗಲು ಅವಕಾಶ ನೀಡಿ: ಒಕ್ಕಲಿಗ ಸಂಘ ಆಗ್ರಹ
ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಯಾಗಲು ಒಮ್ಮೆ ಅವಕಾಶ ನೀಡಲಿ, ನಮ್ಮ ಜನಾಂಗಕ್ಕೆ ಅನ್ಯಾಯವಾಗಲು ಬಿಡೋದಿಲ್ಲ. ನಮ್ಮ ಕೈಗೆ ಪೆನ್ನು ಪೇಪರ್ ಕೊಡಿ ಅಂತ ರಾಜ್ಯದ ಜನತೆಗೆ ಮನವಿ ಮಾಡಿದ್ರು. ಅವರ ಮಾತಿಗೆ ನಂಬಿಕೆ ಇಟ್ಟು ಕಾಂಗ್ರೆಸ್ ಗೆ ಮತ ಹಾಕಿದ್ದಾರೆ. ಸಿದ್ದರಾಮಯ್ಯ ಅಧಿಕಾರ ಕೊಡೋದಿಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ರಾಹುಲ್ ಗಾಂಧಿ ,ಸೋನಿಯಾ ಗಾಂಧಿ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಡಿಕೆಶಿಗೆ ಅವಕಾಶ ಕೊಡ್ಲಿ ಎಂದು ಒಕ್ಕಲಿಗ ಸಂಘದ ರಾಜ್ಯಾಧ್ಯಕ್ಷ
ಸಿಎಂ ಬದಲಾವಣೆ ಚರ್ಚೆ ತೀವ್ರ: ನಿರ್ಮಲಾನಂದನಾಥ ಸ್ವಾಮಿ ದೆಹಲಿಗೆ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ತೀವ್ರ ಕಾವೇರಿದ್ದು, ಬಿರುಸಿನ ಮಾತು, ಚಟುವಟಿಕೆಗಳು ಗರಿಗೆದರಿವೆ, ಈ ಮಧ್ಯೆ ಚುಂಚನಗಿರಿ ಒಕ್ಕಲಿಗ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮಿ ದೆಹಲಿಗೆ ಪ್ರಯಾಣಿಸಿರುವುದು ಕುತೂಹಲ ಕೆರಳಿಸಿದೆ. ಬೆಂಗಳೂರಿನಿಂದ ಇಂಡಿಗೊ ವಿಮಾನದ ಮೂಲಕ ನಿರ್ಮಲಾನಂದನಾಥ ಸ್ವಾಮಿ ದೆಹಲಿಗೆ ಪ್ರಯಾಣಿಸುತ್ತಿದ್ದು,
ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ಇಷ್ಟವಿಲ್ಲ, ಆತ್ಮಸಾಕ್ಷಿ ನಂಬಿದ್ದೇನೆ: ಡಿಸಿಎಂ
ಪಕ್ಷಕ್ಕೆ ಮುಜುಗರ ತರಲು, ದುರ್ಬಲ ಮಾಡಲು ನನಗೆ ಇಷ್ಟವಿಲ್ಲ, ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು.ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕನಕಪುರದಲ್ಲಿ ಡಿಕೆ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ
ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದು ಶಾಸಕರ ಖರೀದಿ ಡೀಲ್‌ಗೆ: ಆರ್ ಅಶೋಕ
ಬೆಂಬಲಿತ ಶಾಸಕರ ಸಹಿ ಪಡೆಯಲೆಂದೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರದ ಜೈಲಿಗೂ ಹೋಗಿದ್ದಾರೆ. ಕಾಂಗ್ರೆಸ್ ಪಕ್ಷದೊಳಗೆ ಕುದುರೆ ವ್ಯಾಪಾರ ಬಲು ಜೋರಾಗಿದೆ. ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿರುವ ಕುದುರೆ ವ್ಯಾಪಾರದ ಮಾತುಗಳಲ್ಲಿ ಸತ್ಯವಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ
ಸಿದ್ದರಾಮಯ್ಯ ಹೇಳಿದ ಮೇಲೆ ಅದೇ ವೇದವಾಕ್ಯ, ಅವರು ಪಕ್ಷಕ್ಕೆ ದೊಡ್ಡ ಆಸ್ತಿ: ಡಿಕೆ ಶಿವಕುಮಾರ್
“ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಶಿಡ್ಲಘಟ್ಟ ಹಾಗೂ ಬೆಂಗಳೂರಿನ
ಅಧಿಕಾರ ಹಂಚಿಕೆ: ಹೈಕಮಾಂಡ್ ತೀರ್ಮಾನಕ್ಕೆ ನಾನೂ, ಶಿವಕುಮಾರ್ ಬದ್ಧರಾಗಬೇಕು ಎಂದ ಸಿಎಂ
ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ ಕೆ ಶಿವಕುಮಾರ್ ಒಪ್ಪಬೇಕು, ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿಕೆ ಶಿವಕುಮಾರ್ ಬದ್ಧರಾಗಬೇಕು ಎಂದು ಮುಖ್ಯಮಂತ್ರಿ ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಕ್ಕಬಳ್ಳಾಪುರ- ಶಿಡ್ಲಘಟ್ಟದಲ್ಲಿ
ಡಿಕೆ ಶಿವಕುಮಾರ್ ಸಿಎಂ ಆಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಅಭಿಮಾನಿಗಳಿಂದ ಪೂಜೆ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಮಾಲಾಧಾರಿಗಳಾಗಿ ಶಬರಿಮಲೆ ಯಾತ್ರೆಗೆ ಸಿದ್ಧರಾಗಿರುವ ಭಕ್ತರು ಡಿಕೆ ಶಿವಕುಮಾರ್ ಅವರ ಭಾವಚಿತ್ರ
ಸಿದ್ದರಾಮಯ್ಯರಿಗೆ ಕಪಟ ಬುದ್ಧಿ ಇಲ್ಲ, ಶಿವಕುಮಾರ್‌ಗೆ ಸಿಎಂ ಸ್ಥಾನ ಖಚಿತ: ಹುಲಿಗೆಮ್ಮದೇವಿ ಆರಾಧಕಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಕೆ ಶಿವಕುಮಾರ್ ಅವರನ್ನು ತಮ್ಮನಂತೆ ನೋಡಿಕೊಂಡಿದ್ದಾರೆ. ಸಿದ್ದರಾಮಯ್ಯನವರ ಹತ್ತಿರ ಕಪಟ ಬುದ್ಧಿ ಇಲ್ಲ. ಹೀಗಾಗಿ ಅವರು ಖುಷಿಯಿಂದಲೇ ಶಿವಕುಮಾರ್‌ಗೆ ಸ್ಥಾನ ಬಿಟ್ಟುಕೊಡುತ್ತಾರೆ, ಶಿವಕುಮಾರ್ ಸಿಎಂ ಆಗುವುದು ಖಚಿತ ಎಂದು ಗದುಗಿನ ದೇವಿ ಆರಾಧಕಿ ಭೈಲಮ್ಮ ಬಾಳಮಣ್ಣವರ ಭವಿಷ್ಯ ಹೇಳಿದ್ದಾರೆ.
ಹಣೆಯಲ್ಲಿ ಬರೆದಿದ್ದರೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಡಿಕೆ ಸುರೇಶ್
“ನಮ್ಮ ಸಹೋದರ ಡಿಕೆಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕೆ ಏಕೆ ತಲೆಕೆಡಿಸಿಕೊಳ್ಳಬೇಕು” ಎಂದು ಬಮೂಲ್ ಅಧ್ಯಕ್ಷ, ನಿಕಟಪೂರ್ವ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಸಹೋದರನ ರಾಜಕೀಯ ಭವಿಷ್ಯ ಬದಲಾಗಲಿದೆ ಹಾಗೂ
ಹಾಲುಮತದವರು ಅವರಾಗಿಯೇ ಪದತ್ಯಾಗ ಮಾಡಬೇಕು, ಬಲವಂತ ಸಾಧ್ಯವಿಲ್ಲ ಎಂದ ಕೋಡಿಮಠದ ಶ್ರೀ
ಹೋದ ಸಲ ಐದು ವರ್ಷವಾದರೂ ಅವರನ್ನು ಏನೂ ಮಾಡಲು ಆಗಲಿಲ್ಲ. ಅವರಾಗಿಯೇ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ. ಹಾಲುಮತ ಸಮಾಜಕ್ಕೆ ಘನತೆ, ಗೌರವವಿದೆ, ಅಧಿಕಾರ ಬಂದರೆ, ವಾಪಸ್ ತೆಗೆದುಕೊಳ್ಳುವುದು ಕಷ್ಟ ಎಂದು ಕೋಡಿಮಠದ ಶ್ರೀಗಳು ಹೇಳಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ




