Menu

ಮೈ ಕೊರೆಯುವ ಚಳಿಗೆ ಬೀದರ್ ಥಂಡಾ, ಜನವರಿಯಲ್ಲಿ 5 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತ?

ಮೈಕೊರೆಯುವ ಚಳಿಗೆ ಬೀದರ್ ಜಿಲ್ಲೆಯ ಜನರು ತತ್ತರಿಸಿದ್ದಾರೆ, ಇಲ್ಲಿ ಕನಿಷ್ಠ ತಾಪಮಾನ ತೀವ್ರ ಕುಸಿತವಾಗಿದ್ದು, 7.4 ಡಿಗ್ರಿ ಸೆಲ್ಸಿಯಸ್‌  ದಾಖಲಾಗಿದ್ದು ಜನ ಹೈರಾಣಾಗಿದ್ದಾರೆ. ಜನವರಿ ತಿಂಗಳಲ್ಲಿ ಇನ್ನಷ್ಟು ಚಳಿ ಇರಲಿದ್ದು, 5 ಡಿಗ್ರಿ ವರೆಗೂ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಟೊಪ್ಪಿ, ಸ್ವೆಟ್ಟರ್, ಗ್ಲೌಸ್ ಧರಿಸಿ ಮನೆಯಿಂದ ಜನ ಮನೆಯಿಂದ ಹೊರ ಬರಬೇಕಾಗಿದೆ. ಡಿ.17ರವರೆಗೂ ಇದೇ ರೀತಿ ಚಳಿ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.