Menu

ಹಾಸನ ಗಣೇಶೋತ್ಸವ ದುರಂತ: ಸಂತ್ರಸ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರಕ್ಕೆ ಆರ್‌.ಅಶೋಕ ಆಗ್ರಹ

ಹಾಸನ  ಗಣೇಶ ವಿಸರ್ಜನೆಯ ಮೆರವಣಿಗೆ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಮೃತದ ಕುಟುಂಬಗಳಿಗೆ ಭೇಟಿ ನೀಡಿ ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. 9 ಜನರು ಮೃತಪಟ್ಟಿರುವುದು ದೊಡ್ಡ ದುರಂತ. ಈ ಘಟನೆಯಿಂದಾಗಿ ಇಡೀ ರಾಜ್ಯ ಜನರು ದುಃಖಕ್ಕೊಳಗಾಗಿದ್ದಾರೆ. ಲಾರಿಯ ಚಾಲಕ ಏಕೆ ಹೀಗೆ ಚಾಲನೆ ಮಾಡಿದ ಎಂದು ತಿಳಿದುಬರಬೇಕಿದೆ.