Karnataka courts
ರಾಜ್ಯದ ಹಲವು ಕೋರ್ಟ್‌ಗಳಿಗೆ ಹುಸಿ ಬಾಂಬ್ ಬೆದರಿಕೆ
ರಾಜ್ಯದ ಹಲವು ನ್ಯಾಯಾಲಯ ಕಟ್ಟಡಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಐಡಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್ಗಳು ಬಂದಿವೆ. ಹೀಗಾಗಿ ಕೋರ್ಟ್ ಆವರಣಗಳಲ್ಲಿ ಆತಂಕ ಸೃಷ್ಟಿಯಾಗಿತ್ತು, ಪೊಲೀಸರು ತಪಾಸಣೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ karunanidhi.kundi@underworld.dog ಎಂಬ ಐಡಿಯಿಂದ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಮಧ್ಯಾಹ್ನ 2 ಗಂಟೆಗೆ 23 ಸೈನೈಡ್ ವಾಯು ಗುಂಡಿಗಳು ಸ್ಫೋಟವಾಗಲಿವೆ ಎಂದು ಉಲ್ಲೇಖಿಸಲಾಗಿದೆ.
ರಾಜ್ಯದ ಕೋರ್ಟ್‌ಗಳಿಗೆ ಬಾಂಬ್ ಬೆದರಿಕೆ
ರಾಜ್ಯದಲ್ಲಿ ಹಲವು ನ್ಯಾಯಾಲಯಗಳಿಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಧಾರವಾಡ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ಕ್ರಮ ಕೈಗೊಂಡಿವೆ. ಈ ಹಿಂದೆ



