Karnataka film industry
ಕನ್ನಡ ನಟ ಹರೀಶ್ ರೈ ಇನ್ನಿಲ್ಲ
ಕಳೆದ ಕೆಲವು ತಿಂಗಳಿನಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹಾಗೂ ಪೋಷಕ ನಟ ಹರೀಶ್ ರೈ (55) ನಿಧನರಾದರು. ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 11 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2 ಚಿತ್ರಗಳು ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ಅವರು ನಟಿಸಿದ್ದರು. ಥೈರಾಯ್ಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಹರೀಶ್ ರೈ ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತು ಸಿಗದಂತಾಗಿದ್ದರು.


