Karnataka Governor
ರಾಜ್ಯಪಾಲರ ವಿರುದ್ದ ಕ್ರಮ ಖಂಡನೀಯ, ಬಿಕೆ ಹರಿಪ್ರಸಾದ್ ವಿರುದ್ದ ಕ್ರಮ ಜರುಗಿಸಿ : ಬೊಮ್ಮಾಯಿ
ರಾಜ್ಯ ಸರ್ಕಾರ ಕೇವಲ ರಾಜಕಾರಣಕ್ಕಾಗಿ ಮತ್ತು ತಮ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ದ ಆರೋಪ ಮಾಡುತ್ತಿರುವುದು ರಾಜ್ಯಪಾಲರಿಗೆ ತೋರಿರುವ ಅಗೌರವ. ಅದು ಸಂವಿಧಾನಕ್ಕೆ ಮಾಡಿರುವ ಅಪಚಾರ. ಅವರ ಮೇಲೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ಹಿಂದಿನ ರಾಜ್ಯಪಾಲರು ಮೊದಲ ಪುಟ ಕೊನೆ ಪುಟ ಓದದೆ ಇರುವ ಅನೇಕ ಉದಾಹರಣೆಗಳಿವೆ.
37 ಸಕೆಂಡ್‌ಗಳಲ್ಲಿ ಗವರ್ನರ್ ಎಸಗಿದ ಅಪಚಾರ ಒಂದೆರಡಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
37 ಸಕೆಂಡ್‌ಗಳಲ್ಲಿ ರಾಜ್ಯಪಾಲರು ಎಸಗಿದ ಅಪಚಾರ ಒಂದೆರಡಲ್ಲ, ರಾಷ್ಟ್ರಗೀತೆಗೆ ಅಪಚಾರ, ಸಂವಿಧಾನಕ್ಕೆ ದ್ರೋಹ, ಕರ್ನಾಟಕಕ್ಕೆ ಅಗೌರವ, ಕನ್ನಡಿಗರಿಗೆ ಅಪಮಾನ, ರಾಜ್ಯ ಸರ್ಕಾರಕ್ಕೆ ಅವಮಾನ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದು, ರಾಜ್ಯಪಾಲರಿಂದ ಇಷ್ಟೆಲ್ಲ ಅಪಚಾರವಾದರೂ ಬಿಜೆಪಿಯವರ ಸಮರ್ಥನೆ ನೋಡುತ್ತಿದ್ದರೆ ರಾಜ್ಯಪಾಲರ
ಭಾಷಣ ಮಾಡದ ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ: ಸಿಎಂ ಸಿದ್ದರಾಮಯ್ಯ
ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ
ದ್ವೇಷ ಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕಾರವಾಗಿದ್ದು ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ . ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಿಂದ ಬಿಜೆಪಿ
ಅರ್ಚಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ
ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದಿಂದ ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ ನಡೆಯಿತು. ಮುಜರಾಯಿ ಕಾನೂನು ತಿದ್ದುಪಡಿ ಕಾಯ್ದೆಯನ್ನು ರಾಜ್ಯಪಾಲರು ತಡೆ ಹಿಡಿಯುತ್ತಿ ದ್ದಾರೆ ಎಂಬುದು ಒಕ್ಕೂಟದ ಆರೋಪ. ಮುಜರಾಯಿ ತಿದ್ದುಪಡಿ ಕಾಯ್ದೆ ಉಭಯ ಸದನಗಳಲ್ಲಿ ಸಮ್ಮತಿ ಪಡೆದಿದೆ,
500 ಕೋಟಿ ರೂ. ಕಿಕ್ ಬ್ಯಾಕ್: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಗೆ ದೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವುದಾಗಿ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದೆ. ಈ ವಿಚಾರವಾಗಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ಎಂಬವರು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ರಾಜ್ಯಪಾಲರು ಸುಗ್ರೀವಾಜ್ಞೆ ಪ್ರಸ್ತಾಪ ತಿರಸ್ಕರಿಸಿಲ್ಲ: ಸಚಿವ ಕೆ.ಎನ್.ರಾಜಣ್ಣ
ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ರಾಜ್ಯ ಸರಕಾರ ರೂಪಿಸಿರುವ ಮಸೂದೆಯ ಸುಗ್ರೀವಾಜ್ಞೆ ಪ್ರಸ್ತಾಪವನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ. ಒಂದಷ್ಟು ಮರು ಪರಿಶೀಲನೆ ಮಾಡುವಂತೆ ತಿಳಿಸಿದ್ದಾರೆ ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ ಅವರು, ಮೈಕ್ರೋ




