Karnataka govt failure
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳು, ಕೈದಿಗಳ ಕೈಯಲ್ಲಿ ಫೋನ್, ಡ್ರಗ್ಸ್: ಆರ್ ಅಶೋಕ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್ ಬಂದಿದೆ. ಡ್ರಗ್ಸ್ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆಗಾರರಿಗೆ, ಭಯೋತ್ಪಾದಕರಿಗೆ ರೆಸಾರ್ಟ್, ಫೈವ್ ಸ್ಟಾರ್ ಸೌಲಭ್ಯ ನೀಡಲಾಗುತ್ತಿದೆ. ಕೈದಿಗಳು ಬ್ಯಾರಕ್ಗೆ ವರ್ಗಾವಣೆ ಮಾಡಿಸಿ ಕೊಳ್ಳಲು ಜೈಲಧಿಕಾರಿಗಳಿಗೆ ಲಂಚ ನೀಡುತ್ತಾರೆ.


