Menu

ಜಿಬಿಎ 5 ಪಾಲಿಕೆ ವಾರ್ಡ್‌ಗಳಲ್ಲಿ ಎಸ್ಸಿ, ಎಸ್ಟಿ, ಒಬಿಸಿ, ಮಹಿಳೆಯರಿಗೆ ಶೇ.50 ಮೀಸಲು: ಸರ್ಕಾರದಿಂದ ಕರಡು ಅಧಿಸೂಚನೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ 369 ವಾರ್ಡ್‌ಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ನಿಗದಿಪಡಿಸಿ ಕರಡು ಅಧಿಸೂಚನೆ ಪ್ರಕಟಿಸಿದೆ. ಜನಸಂಖ್ಯೆ ಆಧಾರದಲ್ಲಿ ಮೇಲೆ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರಿಗೆ ಶೇ.50 ಮೀಸಲಾತಿ ನೀಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಯುತ್ತಿರುವ ಹಿನ್ನಲೆಯಲ್ಲಿ ವಾರ್ಡ್ ಮೀಸಲಾತಿಯನ್ನು ಜನಸಂಖ್ಯೆಗೆ ಅನುಸಾರ ನಿಗದಿಪಡಿಸಲಾಗಿದೆ. ಡಿಸೆಂಬರ್ 19ರಂದು ರಾಜ್ಯ ಸರ್ಕಾರ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿ: ಮೆಕಾನಿಸಂ ಎಲ್ಲಿ ?

ತಮಿಳುನಾಡು, ಅಂಧ್ರ ಪ್ರದೇಶದಲ್ಲಿ ಸರ್ಕಾರಿ ನೌಕರಿ ನೇಮಕಾತಿ ವಿಷಯದಲ್ಲಿ ಹಲವು ಹತ್ತು ಸುಧಾರಣೆಗಳು ಜಾರಿಯಲ್ಲಿವೆ. ಈ ರಾಜ್ಯಗಳ ನೇಮಕ ಪ್ರಕ್ರಿಯೆ ಸುಗಮ ಮತ್ತು ಸರಳವಾಗಿದ್ದು ಜನಮೆಚ್ಚುಗೆಯನ್ನೂ ಪಡೆದಿವೆ. ಆದರೆ ಕರ್ನಾಟಕದಲ್ಲಿ ಪ್ರತಿಯೊಂದು ನೇಮಕಾತಿಯೂ ವಿವಾದಕ್ಕೆ ಸಿಲುಕಿ ಕೋರ್ಟ್ ಮತ್ತು ಟ್ರಿಬೂನಲ್‌ನಲ್ಲಿ ವರ್ಷಾನುಗಟ್ಟಳೆ

ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಅವರು ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು 7 ದಶಕಗಳು

ಕೋಗಿಲು ಪ್ರಕರಣಕ್ಕೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲವೆಂದು ಪಿಣರಾಯಿ ಸಮರ್ಥನೆ

ಕೋಗಿಲು ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯನ್ನು ‘ಬುಲ್ಡೋಜರ್‌ ನ್ಯಾಯ’ ಎಂದು ಟೀಕಿಸಿ, ಕರ್ನಾಟಕ ಸರ್ಕಾರದ ಆಕ್ರೋಶಕ್ಕೆ ಗುರಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಇಂತಹ ವಿಷಯಗಳ ಬಗ್ಗೆ ಪ್ರತಿಕ್ರಿಯಿಸಲು ರಾಜ್ಯದ ಗಡಿ ಅಡ್ಡ ಬರುವುದಿಲ್ಲ ಎನ್ನುವ ಮೂಲಕ

ಕೋವಿಡ್ ಭ್ರಷ್ಟರ ಹೆಸರನ್ನು ಸರ್ಕಾರ ಬಹಿರಂಗಪಡಿಸಲಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ

ಕೋವಿಡ್ ಸಮಯದಲ್ಲಿ ಭ್ರಷ್ಟ ಅಧಿಕಾರಿಗಳು ಮತ್ತು ಅಂದಿನ ಮಂತ್ರಿಗಳ ಕೈಚಳಕದಿಂದ ಕೈಲಾಗದಂತಹ ಸಾವಿರಾರು ಮಂದಿ ಆಮ್ಲಜನಕದ ಸಿಲಿಂಡರ್ ಮತ್ತು ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪ್ರಾಣ ತ್ಯಜಿಸಿದರು! ಇಂತಹವರನ್ನು ಶಿಕ್ಷೆಗೆ ಗುರಿಪಡಿಸಲು ಸಿದ್ದರಾಮಯ್ಯ ಸರ್ಕಾರ ಮೀನ- ಮೇಷ ಎಣಿಸುವ ಅಗತ್ಯವಿಲ್ಲ . ಸರ್ಕಾರಕ್ಕೆ

ಇನ್ನು ಆರು ತಿಂಗಳು ಕೆಎಸ್ಸಾರ್ಟಿಸಿ ನೌಕರರು ಮುಷ್ಕರ ಮಾಡುವಂತಿಲ್ಲ

2026ರ ಜ.1ರಿಂದ ಮುಂದಿನ 6 ತಿಂಗಳವರೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ಮಾಡುವಂತಿಲ್ಲ ಎಂದು ಸರ್ಕಾರ ಸಾರಿಗೆ ನೌಕರರಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಸಂದರ್ಭದಲ್ಲಿಯೂ ಮುಷ್ಕರ ಮಾಡಬಾರದು ಎಂದು ಮುಷ್ಕರ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ

ಇಷ್ಟೊಂದು ಅಕ್ರಮ ವಾಸಿಗಳು ಕೋಗಿಲು ಸೇರಿದ್ದು ಹೇಗೆಂದು ತನಿಖೆಯಾಗಲಿ: ಸುರೇಶ್‌ ಕುಮಾರ್‌ ಆಗ್ರಹ

ಕೋಗಿಲು ಕ್ರಾಸ್‌ನ ಡಂಪ್‌ ಸೈಟ್‌ನಲ್ಲಿ ಇಷ್ಟೊಂದು ಜನ ಬಂದು  ಅಕ್ರಮವಾಗಿ ಶೆಡ್‌ ನಿರ್ಮಿಸಿಕೊಂಡು ವಾಸಿಸಿದ್ದು ಹೇಗೆ ಎಂಬುದು ಮೊದಲು ತನಿಖೆಯಾಗಬೇಕು ಎಂದು ಶಾಸಕ ಸುರೇಶ್ ಕುಮಾರ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕೋಗಿಲು ಲೇಔಟ್ ಅಕ್ರಮ ಮನೆ ಸಕ್ರಮ ಮಾಡಿದ ಸರ್ಕಾರದ ಕ್ರಮವನ್ನು ಕಾಂಗ್ರೆಸ್‌

ರಾಜ್ಯದಲ್ಲಿ ಕೋವಿಡ್‌ ಅಕ್ರಮ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ ಜಸ್ಟಿಸ್‌ ಡಿ ಕುನ್ಹಾ ಆಯೋಗ

ರಾಜ್ಯದಲ್ಲಿ ಕೋವಿಡ್‌ ಅವಧಿಯಲ್ಲಿ ಸಂಭವಿಸಿದ ಸಾವುಗಳು ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಮತ್ತು ಅವ್ಯವಹಾರಗಳ ಕುರಿತಂತೆ ತನಿಖೆ ನಡೆಸಿರುವ ನ್ಯಾ. ಜಾನ್‌ ಮೈಕಲ್‌ ಡಿ ಕುನ್ಹಾ ಆಯೋಗ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದೆ. ಬೆಳಗಾವಿ ಜಿಲ್ಲೆ ವ್ಯಾಪ್ತಿಯ

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ 10ನೇ ವರದಿಯಲ್ಲಿ ಏನೇನಿದೆ 

ಮಾಜಿ ಸಚಿವರಾದ ಶಾಸಕ ಆರ್.ವಿ.ದೇಶಪಾಂಡೆ ಅವರ ಅಧ್ಯಕ್ಷತೆಯ “ಕರ್ನಾಟಕ ಆಡಳಿತಾ ಸುಧಾರಣಾ ಆಯೋಗ”ದ 10ನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಸಲ್ಲಿಸಲಾಯಿತು. ಸಚಿವರಾದ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು. ಆಯೋಗದ ಹಿನ್ನೆಲೆ ಮತ್ತು ರಚನೆ :

ಕೃಷಿ ಸಚಿವರ ತವರಲ್ಲೇ ಆರಂಭವಾಗದ ಭತ್ತ ಖರೀದಿ ಕೇಂದ್ರ: ಆರ್‌ ಅಶೋಕ

ಸಿಎಂ @siddaramaiah ನವರೇ, ಡಿಸೆಂಬರ್ ಆರಂಭದಲ್ಲೇ ಆರಂಭವಾಗಬೇಕಿದ್ದ ಭತ್ತ ಖರೀದಿ ಕೇಂದ್ರ ಇನ್ನೂ ಯಾಕೆ ಆರಂಭ ಆಗಿಲ್ಲ? ನಿಮ್ಮ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ನಿದ್ದೆ ಮಾಡುತ್ತಿದ್ದಾರಾ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ. ಭತ್ತ ಖರೀದಿ