Menu

ಕಸ ಗುಡಿಸುವ ಯಂತ್ರಗಳ ಬಾಡಿಗೆಗೆ 613 ಕೋಟಿ ರೂ.: ಸಚಿವ ಸಂಪುಟ ನಿರ್ಧಾರ

ಗ್ರೇಟರ್ ಬೆಂಗಳೂರು ವ್ಯಾಪ್ತಿಯ ರಸ್ತೆಗಳ ಕಸ ಗುಡಿಸಲು 46 ಕಸ ಗುಡಿಸುವ ಯಂತ್ರಗಳ ಖರೀದಿಗೆ ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ರಸ್ತೆಗಳ ಕಸ ಗುಡಿಸಲು ಕಸ ಗುಡಿಸುವ ಯಂತ್ರಗಳನ್ನು ಖರೀದಿಸುವ ಬದಲು 7 ವರ್ಷದ ಅವಧಿಗೆ 46 ಕಸ ಗುಡಿಸುವ ಯಂತ್ರಗಳನ್ನು ಬಾಡಿಗೆಗೆ ಪಡೆಯಲು ನಿರ್ಧರಿಸಿದೆ. ಸಭೆ ಬಳಿಕ ಸಚಿವ ಹೆಚ್​.ಕೆ.ಪಾಟೀಲ್ ಈ ಮಾಹಿತಿ

ಸರ್ಕಾರ ಗೊಂದಲಗಳಲ್ಲಿ ಮುಳುಗಿದ್ದು, ರೈತರನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದೆ: ಆರ್‌ ಅಶೋಕ ಆರೋಪ

ಅಧಿಕಾರ ಹಸ್ತಾಂತರ, ಸಂಪುಟ ವಿಸ್ತರಣೆ, ಆರ್ ಎಸ್ಎಸ್ ನಿಷೇಧ, ಬುರುಡೆ ಪ್ರಕರಣ ಹೀಗೆ ಅನವಶ್ಯಕ ಗೊಂದಲಗಳಲ್ಲೇ ಮುಳುಗಿ ಕಾಲಹರಣ ಮಾಡುತ್ತಿರುವ @INCKarnataka ಸರ್ಕಾರ, ರೈತರನ್ನ ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌

ಸರ್ಕಾರ ಪ್ರತಿ ಟನ್‌ ಕಬ್ಬಿಗೆ 500 ರೂ. ಸಹಾಯಧನ ನೀಡಲಿ: ಆರ್‌. ಅಶೋಕ

ಕಬ್ಬು ಬೆಳೆಗಾರರ ಬದುಕಿನ ಜತೆ ರಾಜ್ಯ ಸರ್ಕಾರ ಚೆಲ್ಲಾಟ ಆಡುತ್ತಿದೆ, ಇದೇ ವರ್ತನೆ ಮುಂದುವರಿದರೆ ರೈತರ ಹೋರಾಟದ ಕಿಚ್ಚು ಸರ್ಕಾರವನ್ನೇ ಆಹುತಿ ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಎಂಟು ದಿನಗಳಿಂದ ಬೆಳಗಾವಿ,

ಸಂಪನ್ಮೂಲ ಕ್ರೋಢೀಕರಣ ಸಮಿತಿಯ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ

ರಾಜ್ಯದ ಆರ್ಥಿಕ ಪರಿಸ್ಥಿತಿ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 2024 ರಲ್ಲಿ ರಚಿಸಲಾದ ಸಂಪನ್ಮೂಲ ಕ್ರೋಢೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ಕರ್ನಾಟಕ ಸರ್ಕಾರಕ್ಕೆ ಸಲ್ಲಿಸಿದೆ. ಸಂಪನ್ಮೂಲ ಕ್ರೋಢೀಕರಣ ಸಮಿತಿಯು ಕೈಗೊಂಡ ಸಮಗ್ರ ವಿಶ್ಲೇಷಣೆ ಮತ್ತು ಶಿಫಾರಸುಗಳನ್ನು

ಕಾರ್ಮಿಕರ ಪರ ವಾದಿಸಲು ವಕೀಲರ ಪಟ್ಟಿ ರಚನೆಗೆ ಸರ್ಕಾರದ ಅನುಮೋದನೆ

ಕಾರ್ಮಿಕರ ಕಾನೂನುಬದ್ಧ ಹಕ್ಕುಗಳನ್ನು ಕಾಪಾಡಿ ಅವರಿಗೆ ನ್ಯಾಯ ಒದಗಿಸಿ ಕೊಡಲು ಅನುಭವವುಳ್ಳ ವಕೀಲರು ಹಾಗೂ ಕಾರ್ಮಿಕ ಕಾನೂನು ತಜ್ಞರನ್ನು ಒಳಗೊಂಡ ವಕೀಲರ ಯಾದಿ/ ಪಟ್ಟಿ (Panel of Advocates) ರಚಿಸಲು ಕಾರ್ಮಿಕ ಇಲಾಖೆ ಮುಂದಾಗಿದ್ದು, ಈ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ.

ನವೆಂಬರ್‌ನಲ್ಲಿ ನಡೆಯಲಿದೆ ಬಿಜೆಪಿಯೊಳಗೆ ಕ್ರಾಂತಿ: ಭೈರತಿ ಸುರೇಶ್‌

ನವೆಂಬರ್ ತಿಂಗಳಿನಲ್ಲಿ ಕ್ರಾಂತಿ ಆಗುವುದು ಕಾಂಗ್ರೆಸ್‌ನಲ್ಲಿ ಅಲ್ಲ, ಬಿಜೆಪಿಯಲ್ಲಿ ಕ್ರಾಂತಿ ಆಗಲಿದೆ. ಹೀಗಾಗಿ ಅವರು ಆ ವಿಚಾರವನ್ನು ಹೇಳಿಕೊಂಡು ಬರುತ್ತಿದ್ದಾರೆ ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ವ್ಯಂಗ್ಯವಾಡಿದ್ದಾರೆ. ಕೋಲಾರ ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರಿಗೆ ಚರ್ಚಿಸಲು ವಿಷಯವಿಲ್ಲ.

ಆರೆಸ್ಸೆಸ್‌ ಚಟುವಟಿಕೆ ನಿರ್ಬಂಧ: ಹೈಕೋರ್ಟ್‌ ತಡೆಯಾಜ್ಞೆ. ಸರ್ಕಾರಕ್ಕೆ ನೋಟಿಸ್‌

ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು

ಕೆಎಸ್‌ಡಿಎಲ್ 451 ಕೋಟಿ ರೂ. ನಿವ್ವಳ ಲಾಭ, 21 ಹೊಸ ಉತ್ಪನ್ನ ಮಾರುಕಟ್ಟೆಗೆ

ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಾರ್ವಜನಿಕ  ಉದ್ದಿಮೆ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್), 2024-2025 ನೇ ಆರ್ಥಿಕ ವರ್ಷದಲ್ಲಿ ದಾಖಲೆಯ ಸಾಧನೆ ಮಾಡುವ ಮೂಲಕ ಭಾರಿ ಲಾಭದೊಂದಿಗೆ ಮುನ್ನಡೆಯುತ್ತಿದೆ. 2024- 25ರ ಆರ್ಥಿಕ ವರ್ಷದಲ್ಲಿ 1786 ಕೋಟಿ ರೂ. ವಹಿವಾಟು

ಕೆಎಸ್ಡಿಎಲ್‌ನಿಂದ ಸರಕಾರಕ್ಕೆ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡುವ ಮೂಲಕ ಡೆವಿಡೆಂಡ್ ಅನ್ನು ಸರಕಾರಕ್ಕೆ ಹಸ್ತಾಂತರಿಸಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ‌ ಸಂಸ್ಥೆಯ

ಸಂಸದ ರಾಘವೇಂದ್ರ ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ: ಡಿಕೆ ಶಿವಕುಮಾರ್

"ಸಂಸದ ರಾಘವೇಂದ್ರ ಅವರು ಹಿಟ್ ಅಂಡ್ ರನ್ ನಾಯಕರ ಪಟ್ಟಿಗೆ ಸೇರುವುದು ಬೇಡ" ಎಂದು ಡಿಸಿಎಂ ಡಿಕೆ ಶಿವಕುಮಾರ್  ಸಲಹೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ  ಅವರು ಪ್ರತಿಕ್ರಿಯೆ ನೀಡಿದರು. ಬಿಹಾರ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಕಿರುಕುಳ