Menu

ಮುಡಾ ಅಕ್ರಮ: ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಸಮ್ಮತಿ

ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪದಡಿ ಮುಡಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಇಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದು, 6 ತಿಂಗಳಿಂದ ತನಿಖೆಯಲ್ಲಿ

ಸ್ಲಂ ಬೋರ್ಡ್‌ನಡಿ 42 ಸಾವಿರ ಮನೆಗಳ ನಿರ್ಮಾಣ, ಮೂಲಸೌಲಭ್ಯಗಳಿಗೆ ಅನುದಾನ

ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಸತಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳ ಬಗ್ಗೆ ವಿವರಿಸಿದರು.

ಗ್ರೇಟರ್‌ ಬೆಂಗಳೂರು: 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನದ ಕಟ್ಟಡಗಳಿಗೆ OC ಬೇಕಿಲ್ಲ

ಗ್ರೇಟರ್‌ ಬೆಂಗಳೂರು ವ್ಯಾಪ್ತಿಯಲ್ಲಿ 1200 ಚ.ಅಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿಗದಿತ ಮಿತಿಯೊಳಗೆ ನಿರ್ಮಾಣಗೊಂಡಿರುವ ಮಹಡಿಗಳು ಮತ್ತು ಹೊಸದಾಗಿ ನಿರ್ಮಿಸುವ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ)ದಿಂದ ವಿನಾಯಿತಿ ನೀಡುವ ಮಹತ್ವದ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ. 1200

ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ಕರೆ ತರಲು ರಾಜ್ಯ ಸರ್ಕಾರ ಕ್ರಮ

ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ಅಲ್ಲಿ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ

ಪಂಚ ಗ್ಯಾರಂಟಿ ಯೋಜನೆಯಡಿ ರೂ. 97,813 ಕೋಟಿ ಅನುದಾನ ವೆಚ್ಚ

ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ.  ಮುಖ್ಯಾಂಶಗಳು ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005

ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ

ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ

ಹೆಸರಘಟ್ಟದಲ್ಲಿ ಕ್ಯೂ-ಸಿಟಿಗೆ 6.17 ಎಕರೆ ಜಾಗ ಮಂಜೂರು

ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್‌ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್‌ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ

ನಮ್ಮ ಸರ್ಕಾರ 65 ಸಾವಿರ ಕೋಟಿ ರೂಪಾಯಿ ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಶಿಕ್ಷಣ ನಮ್ಮ‌ ಸರ್ಕಾರದ ಆದ್ಯತಾ ಕಾರ್ಯಕ್ರಮವಾಗಿದ್ದು ವರ್ಷಕ್ಕೆ 65 ಸಾವಿರ ಕೋಟಿ ರೂಪಾಯಿಯನ್ನು ಶಿಕ್ಷಣಕ್ಕೆ ಖರ್ಚು ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದ್ದಾರೆ. ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ

ಅವೈಜ್ಞಾನಿಕ ನೀತಿಯಿಂದ ಅಬಕಾರಿ ಉದ್ಯಮಕ್ಕೆ ಸಂಕಷ್ಟ : ಆರ್ ಅಶೋಕ್

ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ. ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ

ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರು: ಸಿಎಂ

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬರುತ್ತಿಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ  ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿ, ರಾಜ್ಯ