Menu

ಹೈಕೋರ್ಟ್ ಮೆಟ್ಟಿಲೇರಿದ ಕೋಗಿಲು ಅತಿಕ್ರಮ ಸಂತ್ರಸ್ತರು!

ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ ಅಕ್ರಮ ವಸತಿಗಳ ತೆರವು ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಪುನರ್ವಸತಿ ಮತ್ತು ಪರಿಹಾರ ಕೋರಿ ಸಂತ್ರಸ್ತರಾದ ಜೈಬಾ ತಬಸ್ಸುಮ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಬೇಡಿಕೆಗಳು ಏನು? 30 ವರ್ಷಗಳಿಂದ ಇಲ್ಲಿ 3 ಸಾವಿರ ಜನರು ವಾಸಿಸುತ್ತಿದ್ದಾರೆ. ವಸೀಂ, ಫಕೀರ್ ಕಾಲೋನಿಗಳ ತೆರವಿನಿಂದ ನಿರ್ವಸತಿಕರಾಗಿದ್ದು, ಎಸ್​ಡಿಪಿಐ ಮತ್ತು ಎಂಐಎಂ ಪಕ್ಷಗಳು ಈಗ ನೆರವು ಒದಗಿಸುತ್ತಿವೆ. ಸರ್ಕಾರ 5 ಕಿ.ಮೀ. ಅಂತರದಲ್ಲೇ ಮರುವಸತಿ ಕಲ್ಪಿಸಬೇಕು ಮತ್ತು

ಬಾಡಿಗೆ ತಾಯ್ತನಕ್ಕೆ ವೃದ್ಧ ದಂಪತಿ ಕೋರಿಕೆ: ಸ್ಪಂದಿಸಲು ರಾಜ್ಯ, ಕೇಂದ್ರಕ್ಕೆ ಹೈಕೋರ್ಟ್‌ ನೋಟಿಸ್‌

ಇದ್ದ ಒಬ್ಬನೇ ಮಗನ ಕಳೆದುಕೊಂಡಿರುವ ವೃದ್ಧ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗು ಪಡೆಯಲು ಕಾನೂನು ಅಡ್ಡಿಯಾಗುತ್ತಿರುವುದನ್ನು ಗಮನಿಸಿರುವ ಹೈಕೋರ್ಟ್,ಪ್ರಕರಣವನ್ನು ಕಾನೂನು ಅಡಿ ಅಲ್ಲ, ಮಾನವೀಯತೆಯಿಂದ ನೋಡಬೇಕಿದೆ, ಅರ್ಜಿದಾರರ ಮನವಿಗೆ ಸ್ಪಂದಿಸಲು ಸೂಚಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ.

ಬಿಜೆಪಿ ನಾಯಕರಿಗೆ ಮುಖಭಂಗ: ಸ್ಮಾರ್ಟ್ ಮೀಟರ್ ಗುತ್ತಿಗೆ ಹಗರಣದ ಅರ್ಜಿ ವಜಾ!

ಬೆಂಗಳೂರು: ಸ್ಮಾರ್ಟ್ ಮೀಟರ್ ಗುತ್ತಿಗೆಯಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಲು ನಿರ್ದೇಶನ ಕೋರಿ ಬಿಜೆಪಿ ಮುಖಂಡರು ಸಲ್ಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್‌ ರದ್ದುಪಡಿಸಿದೆ. ಬಿಜೆಪಿ ನಾಯಕರಾದ ಸಿ.ಎನ್. ಅಶ್ವತ್ಥನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಸಲ್ಲಿಸಿದ್ದ

ಪರಿಶಿಷ್ಟ ಜಾತಿ, ಪಂಗಡಗಳ ಮೀಸಲಾತಿ ಮಿತಿ ಹೆಚ್ಚಳಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ(ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ

ಧರ್ಮಸ್ಥಳದ ಶವ ಪತ್ತೆ ಪ್ರತ್ಯೇಕ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತಲು 74 ಅನಾಥ ಶವಗಳನ್ನು ಹೂತು ಹಾಕಿರುವ ಆರೋಪ ಸಂಬಂಧದ ಎಲ್ಲ ಪ್ರಕರಣಗಳಲ್ಲೂ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚನೆ ನೀಡಬೇಕು ಎಂದು ಕೋರಿ ಮೃತ ಬೆಳ್ತಂಗಡಿ ವಿದ್ಯಾರ್ಥಿನಿಯ ತಾಯಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಆರೆಸ್ಸೆಸ್‌ ಚಟುವಟಿಕೆ ನಿರ್ಬಂಧ: ಹೈಕೋರ್ಟ್‌ ತಡೆಯಾಜ್ಞೆ. ಸರ್ಕಾರಕ್ಕೆ ನೋಟಿಸ್‌

ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಪೀಠ ಮಧ್ಯಂತರ ತಡೆಯಾಜ್ಞೆ ವಿಧಿಸಿದೆ. 10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು

ಹೆಲ್ಮೆಟ್‌ ಧರಿಸದ ಬೈಕ್‌ ಸವಾರ ಅಪಘಾತಕ್ಕೆ ಬಲಿ: ಪರಿಹಾರ ಮೊತ್ತ ಕಡಿತಗೊಳಿಸಿದ ಹೈಕೋರ್ಟ್‌

ಅಪಘಾತ ಪ್ರಕರಣವೊಂದರ ವಿಚಾರಣೆ ನಡೆಸಿರುವ ಹೈಕೋರ್ಟ್‌, ಅಪಘಾತ ವೇಳೆ ಬೈಕ್‌ ಸವಾರ ಹೆಲ್ಮೆಟ್‌ ಧರಿಸದಿದ್ದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ ಏಳೂವರೆ ಲಕ್ಷ ರೂ.. ಕಡಿತಗೊಳಿಸಿ ಆದೇಶಿಸಿದೆ.  ಹೆಲ್ಮೆಟ್‌ ಧರಿಸದೆ ಇರುವುದು ಬೈಕ್‌ ಸವಾರನ ನಿರ್ಲಕ್ಷ್ಯವೆಂದು ಹೇಳಿದ ಕೋರ್ಟ್‌, ನಿಗದಿಪಡಿಸಿದ ಒಟ್ಟು

ಕೆಆರ್‌ಪೇಟೆ ಬಾಲಕಿಯ ಸಾಮೂಹಿಕ ಅತ್ಯಾಚಾರ: ವೃದ್ಧನಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ 68 ವರ್ಷದ ವ್ಯಕ್ತಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಲು ಕೋರಿ ಆರೋಪಿ ಚನ್ನಪ್ಪರ್ ಅಲಿಯಾಸ್​ ರಾಜಯ್ಯ (68) ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ

ಮತ್ತೆ ಪತಿಯೊಂದಿಗೆ ಜೀವಿಸಬೇಕೆಂದು ವಿಚ್ಛೇದಿತೆ ಮನವಿ: ನಿರಾಕರಿಸಿದ ಹೈಕೋರ್ಟ್‌

ಮದುವೆಯಾದ ಮಹಿಳೆ ಪತಿಯೊಂದಿಗೆ ದೈಹಿಕ ಸಂಪರ್ಕಕ್ಕೆ ಒಪ್ಪದೆ ಆತನ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿ ಮತ್ತೆ ಆತನೊಂದಿಗೆ ಜೀವನ ನಡೆಸಲು ಬಯಸಿದ್ದು, ಆತ ಒಪ್ಪದಿದ್ದಾಗ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ. ಆದರೆ ಕೋರ್ಟ್‌ ಆಕೆಯ ಮನವಿಯನ್ನು ನಿರಾಕರಿಸಿದೆ. ಇದು ಪತಿಗೆ ಪತ್ನಿಯಿಂದ

ಬೈಕ್​ ಟ್ಯಾಕ್ಸಿ ನಿರ್ಬಂಧ: ನಿಯಮ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಅಸಮಾಧಾನ

ಬೈಕ್ ಟ್ಯಾಕ್ಸಿ ಸೇವೆ ನಿರ್ಬಂಧ ಕುರಿತು ನೀತಿ ಚೌಕಟ್ಟು ರೂಪಿಸಲು ಒಂದು ತಿಂಗಳ ಸಮಯ ನೀಡಲಾಗಿದ್ದರೂ ಈವರೆಗೂ ಯಾವುದೇ ನಿಯಮಾವಳಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ಮಾಲೀಕರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠವು,