Karnataka HighCourt
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು
ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. ಐದು ಲಕ್ಷ ರೂ. ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ಕೋರ್ಟ್ ಆದೇಶಿಸಿದೆ. ವಿನಯ್ ಕುಲಕರ್ಣಿ ದೋಷಿ ಎಂದು ಪ್ರಕಟಿಸಿದ್ದ ತೀರ್ಪಿಗೂ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾ.ಮೊಹಮ್ಮದ್ ನವಾಜ್, ಜಿ.ಬಸವರಾಜ ಅವರಿದ್ದ ಪೀಠವು ಈ ಆದೇಶ
BMIC ಅತಿ ದೊಡ್ಡ ಸ್ಕ್ಯಾಮ್, ಯೋಜನೆಯಿಂದ ಸಾರ್ವಜನಿಕರಿಗೆ ಏನೂ ದಕ್ಕಿಲ್ಲ, ಪ್ರವರ್ತಕರಿಗೇ ಲಾಭ: ಹೈಕೋರ್ಟ್ ಚಾಟಿ
ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯು ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ಚಾಟಿ ಬೀಸಿದೆ. ವಂಚನೆ ಹಾಗೂ ಇತರ ಅಪರಾಧಗಳ ಆರೋಪಗಳ ಕುರಿತು ತಜ್ಞರ ವಿಶೇಷ ತಂಡದಿಂದ ಸ್ವತಂತ್ರ ತನಿಖೆ ಮತ್ತು ಯೋಜನೆಯ ಲೆಕ್ಕಪತ್ರಗಳ ಫೊರೆನ್ಸಿಕ್ ಆಡಿಟ್
ಪೋಕ್ಸೋ ಆರೋಪಿ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ರದ್ದು
ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಪಡೆದುಕೊಂಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿದೆ. ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಆದೇಶ ಪ್ರಕಟಿಸಿದೆ. ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಮೂರು ವಾರಗಳ
ಅಂಗವೈಕಲ್ಯ: ಯುವತಿಯ ಗರ್ಭಕೋಶ ತೆಗೆಸಲು ಹೈಕೋರ್ಟ್ ಅನುಮತಿ
ಅಂಗವೈಕಲ್ಯದ ಜೊತೆ ಬುದ್ಧಿ ಮಾಂದ್ಯತೆ ಹೊಂದಿರುವ ಹೊಂದಿರುವ ಇಪ್ಪತ್ತಮೂರು ವರ್ಷದ ಯುವತಿಯ ಗರ್ಭಾಶಯವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಇದಕ್ಕೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಯುವತಿ ದಿನನಿತ್ಯದ
ಬಿಕ್ಲು ಶಿವ ಕೊಲೆ ಕೇಸ್: ಬೈರತಿ ಬಸವರಾಜ್‌ಗೆ ಮತ್ತೆ ಬಂಧನ ಭೀತಿ
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಹೀಗಾಗಿ ಅವರಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಡಿಸೆಂಬರ್ 26ರಂದು ಹೈಕೋರ್ಟ್ ರಜಾಕಾಲಪೀಠ ಬೈರತಿ ಬಸವರಾಜ್
ದೇವರ ಅಪಹಾಸ್ಯ: ‘ಕಾಮಿಡಿ ಕಿಲಾಡಿಗಳು’ ಶೋಗೆ ಹೈಕೋರ್ಟ್ ಎಚ್ಚರಿಕೆ
ಖಾಸಗಿ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಚಾನೆಲ್ ಮತ್ತು ನಿರ್ದೇಶಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಎಲ್ಲವನ್ನೂ ಅಪಹಾಸ್ಯ ಮಾಡುವ ಪರವಾನಗಿ ಅಲ್ಲ ಎಂದು ಕೋರ್ಟ್ ಎಚ್ಚರಿಕೆ
ಧರ್ಮಸ್ಥಳ ಪ್ರಕರಣದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್
ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರೆಯಲಿದ್ದು, ಪಿತೂರಿ ನಡೆಸಿದ ಆರೋಪ ಎದುರಿಸುತ್ತಿದ್ದ
ಬೈಕ್ ಟ್ಯಾಕ್ಸಿ ಬಳಕೆ ನೀತಿ ರೂಪಿಸುವಲ್ಲಿ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನೀತಿ ರೂಪಿಸಲು ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಈವರೆಗೆ ಯಾವುದೇ ನೀತಿ ರೂಪಿಸಿಲ್ಲ, ನೀತಿ ರೂಪಿಸುವ ವಿಚಾರದಲ್ಲಿ ಸರ್ಕಾರ ವಿಳಂಬ ತೋರಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬೈಕ್ ಟ್ಯಾಕ್ಸಿ ವಿಚಾರ ಬಿಟ್ಟು ಕೇವಲ ಬೈಕ್‌ಗಳನ್ನು
ಚಿತ್ರಮಂದಿರಗಳಲ್ಲಿ ಟಿಕೆಟ್ ಬೆಲೆ 200 ರೂ.: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ
ರಾಜ್ಯದ ಚಿತ್ರಮಂದಿರಗಳಲ್ಲಿ ಟಿಕೆಟ್ನ ಬೆಲೆ 200 ರೂಪಾಯಿಗೆ ನಿಗದಿಪಡಿಸಿ ಸಿದ್ದರಾಮಯ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮಿತಿ ಮೀರಿದ ಟಿಕೆಟ್ ದರದ ವಿರುದ್ಧ ಇಡೀ ಚಿತ್ರರಂಗ ಏಕರೂಪ ಟಿಕೆಟ್ ದರ ನಿಗದಿ ಮಾಡಬೇಕು ಎಂದು ಹೋರಾಟ
ಲೋಕಸಭೆ ಚುನಾವೆಣೆ ವೇಳೆ ₹4.8 ಕೋಟಿ ಪತ್ತೆ: ಸಂಸದ ಸುಧಾಕರ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್
ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ ಕೆ ಸುಧಾಕರ್‌ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಸಭಾ ಚುನಾವಣೆ ವೇಳೆ ಮಾದನಾಯಕನಹಳ್ಳಿ ಮನೆಯಲ್ಲಿ 4.8 ಕೋಟಿ ರೂ. ಪತ್ತೆಯಾಗಿತ್ತು. ಹಣ ಕೆ ಸುಧಾಕರ್ ಗೆ ಸೇರಿದ್ದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.




