Menu

ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ 

ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ರಾಜಸ್ಥಾನಕ್ಕೆ ಪ್ರಯಾಣ ಬೆಳೆಸುವ ಮುನ್ನ ನೀರಾವರಿ ಸಚಿವರೂ ಆದ ಶಿವಕುಮಾರ್ ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದರು. ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ ನಡೆಯುತ್ತಿದ್ದು, ಇಲ್ಲಿ ಎಲ್ಲಾ ರಾಜ್ಯಗಳ