Menu

ಅಮೆರಿಕದಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮತ್ತು ಮಗನ ಎದುರೇ ಕರ್ನಾಟಕದ ವ್ಯಕ್ತಿಯ ಹತ್ಯೆ

ಅಮೆರಿಕದ ಡಲ್ಲಾಸ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮತ್ತು ಮಗನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯನ್ನು ಮಚ್ಚಿನಿಂದ ಹಲ್ಲೆಗೈದು ಶಿರಚ್ಛೇದ ಮಾಡಿರುವ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಕರ್ನಾಟಕದ ಚಂದ್ರ ನಾಗಮಲ್ಲಯ್ಯ (೩೭) ಎಂದು ಗುರುತಿಸಲಾಗಿದೆ. ಯೋರ್ಡಾನಿಸ್ ಕೋಬೋಸ್-ಮಾರ್ಟಿನೆಜ್ ಕೊಲೆಗಾರ. ಡಲ್ಲಾಸ್‌ನ ಮೋಟೆಲ್‌ವೊಂದರಲ್ಲಿ ಚಂದ್ರ ನಾಗಮಲ್ಲಯ್ಯ ಅವರು ಮುರಿದ ವಾಷಿಂಗ್‌ ಮೆಷಿನ್‌ ಬಳಸದಂತೆ ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್‌ಗೆ ಹೇಳಿದ್ದಾರೆ. ಚಂದ್ರ ನಾಗಮಲ್ಲಯ್ಯ ತಾವು ಏನು ಹೇಳುತ್ತಿದ್ದೇನೆ ಎಂಬುದನ್ನು ಭಾಷಾಂತರ ಮಾಡಿ ಹೇಳುವಂತೆ ಇನ್ನೊಬ್ಬರು