Karnataka newss
ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣಗಳಲ್ಲಿ 570 ಜನರ ಬಂಧನ: ಸಚಿವ ಮುನಿಯಪ್ಪ
ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದದ ವಿಧಾನ ಪರಿಷತ್ ನಲ್ಲಿ ಸದಸ್ಯ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದರು. ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು


