karnataka police
ಕೆಲವು ಅಪರಾಧಗಳಲ್ಲಿ ರಾಜ್ಯದ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದ್ದು ತಡೆಗಟ್ಟಿ: ಪೊಲೀಸ್‌ಗೆ ಸಿಎಂ ಸೂಚನೆ
ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸರಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಪದಕ” ಪ್ರದಾನ ಮಾಡಿ ಮಾತನಾಡಿದರು. ಯಾವುದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಯಾ ಠಾಣಾಧಿಕಾರಿಯ ಗಮನಕ್ಕೆ ಬರದಂತೆ ಯಾವುದೇ ಅಪರಾಧಗಳು, ಕೆಟ್ಟ ವ್ಯವಹಾರಗಳು ನಡೆಯಲು ಸಾಧ್ಯವಿಲ್ಲ ಎನ್ನುವುದು ನನ್ನ ನಂಬಿಕೆ ಎಂದರು.
ಸೆಕ್ಸ್ ವಿಕ್ಟಿಮ್ಸ್ ಗುರುತು ಬಹಿರಂಗಗೊಳ್ಳುವಂತಿಲ್ಲ: ಪೊಲೀಸ್ ಠಾಣೆಗಳಿಗೆ ಡಿಜಿಪಿ ಸಲೀಂ ಖಡಕ್ ವಾರ್ನ್
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಂತ್ರಸ್ತರ ಹೆಸರು, ವಿಳಾಸ ಅಥವಾ ಅವರ ಗುರುತನ್ನು ಯಾವುದೇ ಹಂತದಲ್ಲಿ ಬಹಿರಂಗಪಡಿಸಬಾರದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂಎ ಸಲೀಂ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸರ್ವೋಚ್ಚ
ತನಿಖಾ ವರದಿ ಬಳಿಕ ರಾಮಚಂದ್ರ ರಾವ್ ವಿರುದ್ಧ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ
ಕೋಲಾರ: ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತುಗೊಳಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು. ಕೆಜಿಎಫ್ ನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸುಳ್ಳೆಂದು ಡಿಜಿಪಿ ಹೇಳಿಕೊಂಡಿದ್ದಾರೆ. ತನಿಖೆ ವರದಿ ಬಂದ ನಂತರ
ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ
ಕರ್ನಾಟಕ ಪೊಲೀಸ್‌ಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ: ಸಚಿವ ಜಿ ಪರಮೇಶ್ವರ
ಕರ್ನಾಟಕದ ಪೊಲೀಸ್ ಇಲಾಖೆ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಂಡಿಯಾ ಜಸ್ಟಿಸ್ ವರದಿಯ ಪ್ರಕಾರ ರಾಷ್ಟ್ರಮಟ್ಟದಲ್ಲಿ ಮನ್ನಣೆ ಪಡೆದಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ ಅವರು ಹೇಳಿದರು. ತುಮಕೂರು ನಗರದ ಎಂಪ್ರೆಸ್ ಕಾಲೇಜಿನ ಸಭಾಂಗಣದಲ್ಲಿ
ಯಾವುದೇ ಕಾರಣಕ್ಕೂ ಪೊಲೀಸರು ರಾಜಕೀಯ ಹಿಂಬಾಲಕರಾಗಬೇಡಿ: ಡಿಕೆ ಶಿವಕುಮಾರ್
“ಯಾವುದೇ ಸರ್ಕಾರ ಬಂದರೂ ನಿಮ್ಮ ಆತ್ಮ ವಿಶ್ವಾಸ ಹಾಗೂ ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬಾರದು. ಒಂದು ವೇಳೆ ರಾಜಿ ಮಾಡಿಕೊಂಡರೆ ಸಂಪೂರ್ಣವಾಗಿ ವ್ಯವಸ್ಥೆ ಕುಸಿಯಲಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ
ಡ್ರಗ್ಸ್ ಮುಕ್ತ ಕರ್ನಾಟಕ ಸಾಧಿಸಿ ತೋರಿಸಿ: ಪೊಲೀಸ್‌ಗೆ ಸಿಎಂ ಕರೆ
ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ. ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ನಿಮಗೇ ಗೊತ್ತಿರುತ್ತದೆ.
ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ: ಪೊಲೀಸ್ ಇಲಾಖೆ ಅಭಿನಂದಿಸಿದ ಸಿಎಂ
ಬೆಂಗಳೂರು: ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್
ರಾಜ್ಯದ ಪೊಲೀಸರ ರಜೆ ರದ್ದು: ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದ ಸೂಚನೆ ಮೇರೆಗೆ ರಾಜ್ಯದ ಪೊಲೀಸರ ರಜೆಯನ್ನು ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಕೇಂದ್ರದಿಂದ ಸೂಚನೆ
ಭಾರತ-ಪಾಕ್: ಸುಳ್ಳು ಸುದ್ದಿ ಹರಡಿದರೆ ಕಠಿಣ ಕ್ರಮದ ಎಚ್ಚರಿಕೆಯಿತ್ತ ಪೊಲೀಸ್ ಕಮಿಷನರ್ ದಯಾನಂದ್
ಉಗ್ರರ ದಾಳಿಗೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಸಮರ್ಥವಾಗಿಯೇ ಪ್ರತೀಕಾರ ತೀರಿಸಿದೆ. ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಯುದ್ಧದ ಭೀತಿ ಎದುರಾಗಿದ್ದು, ಗಡಿ ಪ್ರದೇಶಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆಯುತ್ತಿವೆ. ಕರ್ನಾಟದಲ್ಲೂ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಸುಳ್ಳು ಸುದ್ದಿಗಳನ್ನು ಹರಡುವವರ




