Karnataka politics
ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಎಚ್.ಸಿ. ಮಹದೇವಪ್ಪ
ಬೆಂಗಳೂರು: ಕಾಂಗ್ರೆಸ್ ವ್ಯವಸ್ಥೆಗೆ ಯಾರೂ ಸಹ ಅನಿವಾರ್ಯವಲ್ಲ, ನಮ್ಮ ಹೈಕಮಾಂಡ್ ಏನ್ ಹೇಳುತ್ತದೆ ಅದರ ತೀರ್ಮಾನವೇ ಅಂತಿಮ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಸತೀಶ್ ಜಾರಕಿಹೊಳಿ ಭವಿಷ್ಯದ ನಾಯಕ ಎಂಬ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾವಾಗ ಏನಾಗಬೇಕೆಂಬುದನ್ನ ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದನ್ನು ಬಿಟ್ಟರೇ ಬೇರೆಯವರ ಮಾತಿಗೆ ಮಾನ್ಯತೆ ಇಲ್ಲ. ಯತೀಂದ್ರ ಹೇಳಿಕೆಗೆ ನಾನು ವಿವರಣೆ
ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ
ಗೋ ಹತ್ಯೆ ಮಾಡಿದವರ ವಿರುದ್ಧ ಪ್ರಕರಣ ಹಿಂಪಡೆದು ಮುಸ್ಲಿಂ ಓಲೈಕೆ: ಆರ್.ಅಶೋಕ
ಬೆಂಗಳೂರು: ಚಿತ್ತಾಪುರದಲ್ಲಿ ಗೋ ಹತ್ಯೆ ಮಾಡಿದವರ ವಿರುದ್ಧ ಪ್ರಕರಣ ಹಿಂಪಡೆದು ಮುಸ್ಲಿಂ ಓಲೈಕೆ ಮಾಡಲಾಗಿದೆ. ಈ ಸರ್ಕಾರ ಮುಸ್ಲಿಮ್ ದುಷ್ಕರ್ಮಿಗಳನ್ನು ಬೆಂಬಲಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ತಾಪುರ ತಾಲೂಕಿನಲ್ಲಿ ಗೋ ಕಳ್ಳ ಸಾಗಾಣಿಕೆ ಹಾಗೂ ಗೋ
ಡಿಕೆ ಶಿವಕುಮಾರ್ ಅಧಿಕಾರ ಕೊಡದಿದ್ದರೆ ದಾರಿಯೇ ಬೇರೆ ಎಂದಿದ್ದಾರೆ: ಆರ್.ಅಶೋಕ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಪಡೆಯುವ ಉದ್ದೇಶದಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯ ನಾಯಕರಿಗೆ ಬೆದರಿಕೆಯ ಸಂದೇಶ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬೆದರಿಸಲು ಡಿಸಿಎಂ ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರಂಟಿ: ಅಶ್ವತ್ಥ ನಾರಾಯಣ್ ಲೇವಡಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಕಾರ್ಯ ವೈಖರಿಯಿಂದ ಸರ್ಕಾರದ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆತ್ಮಹತ್ಯೆ ಗ್ಯಾರೆಂಟಿ ಒಂದೇ ಇರುವುದು ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ
ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ
ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಕೆ ಶಿವಕುಮಾರ್
“ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್
ಅಧಿಕಾರ ಹಂಚಿಕೆ ಕುರಿತು ಮಾತನಾಡಬೇಡಿ: ಕೈ ನಾಯಕರಿಗೆ ಡಿಕೆ ಶಿವಕುಮಾರ್ ಸೂಚನೆ
ಬೆಂಗಳೂರು: ಕಾಂಗ್ರೆಸ್ನಲ್ಲಿ ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದು ಪಕ್ಷಕ್ಕೆ ಡ್ಯಾಮೇಜ್ ಆಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರಿಗೂ ಪವರ್ ಶೇರಿಂಗ್ ಬಗ್ಗೆ ಮಾತನಾಡುವುದಕ್ಕೆ ಹಕ್ಕಿಲ್ಲ. ಕುಣಿಗಲ್ ಶಾಸಕ
ಕುಮಾರಸ್ವಾಮಿ ಹಿಟ್ ಅಂಡ್ ರನ್ ಸಾಕು, ನನ್ನ ವಿರುದ್ಧ ದಾಖಲೆ ಜನರ ಮುಂದಿಡಿ: ಡಿಕೆ ಶಿವಕುಮಾರ್ ಸವಾಲು
ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು
ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ: ಡಿಕೆ ಶಿವಕುಮಾರ್
“ಎಲ್ಲಾ ಗೊಂದಲ ಸರಿಪಡಿಸಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುತ್ತೇವೆ. ಕಾನೂನು ಚೌಕಟ್ಟಿನಲ್ಲಿ ಸಾಮಾಜಿಕ ನ್ಯಾಯ ಒದಗಿಸುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಮನಗರದಲ್ಲಿ ನಡೆದ ಮಾಜಿ ಸಿಎಂ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ




