Karnataka politics
ಗಾಂಧೀಜಿಗೆ ಅಪಮಾನ ಮಾಡಿದ ಕಾಂಗ್ರೆಸ್: ಗೋವಿಂದ ಕಾರಜೋಳ
ಬೆಂಗಳೂರು: ನರೇಗಾದಡಿ ವಿನೂತನ ತಂತ್ರಜ್ಞಾನ, ಪಾರದರ್ಶಕತೆ ಕಾಂಗ್ರೆಸ್ಸಿಗರಿಗೆ ದೊಡ್ಡ ಸವಾಲಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರ ಮಾಡಿ ಖಜಾನೆಯಿಂದ ಹಣ ಎತ್ತಿಕೊಂಡು ಹೋಗುತ್ತಿದ್ದರು. ಅದು ತಪ್ಪಲಿದೆ ಎಂದರು. ಅದಕ್ಕಾಗಿ ಹೊಟ್ಟೆ ಉರಿಯಿಂದ ಹೇಳಿಕೊಳ್ಳುತ್ತಿದ್ದಾರೆ ಎಂದು ನುಡಿದರು. ಗಾಂಧಿ ಹೆಸರನ್ನು ಅಳಿಸಿದವರು ಯಾರು ಎಂಬುದಕ್ಕೆ ಉದಾಹರಣೆಗಳನ್ನು ನೀಡಿದ ಅವರು, ರಾಜ್ಯದಲ್ಲಿ 25 ಯೋಜನೆಗಳು ರಾಜೀವ್ ಗಾಂಧಿ, ಇಂದಿರಾ
ದಾಖಲೆಗಳನ್ನು ಮುರಿಯಲೆಂದು ರಾಜಕಾರಣಕ್ಕೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ
ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ, ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ
ಮಾಧ್ಯಮಗಳ ಮುಂದೆ ರಾಜಕಾರಣ ಮಾಡೋರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು
ಬೆಂಗಳೂರು: “ಕುಮಾರಸ್ವಾಮಿ ಅವರು ಯಾವಾಗಲೋ ಬರುತ್ತಾರೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಹೋಗುತ್ತಾರೆ. ಅವರು ಗಂಭೀರ ರಾಜಕಾರಣ ಮಾಡುವವರಲ್ಲ. ಮಾಧ್ಯಮಗಳ ಮುಂದೆ ಮಾತ್ರ ರಾಜಕಾರಣ ಮಾಡುವವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ
ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಿರೋದು ಕೇಂದ್ರ: ಡಿಕೆ ಶಿವಕುಮಾರ್
“ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ. ರಾಜ್ಯದ ಸಮಸ್ಯೆಗಳ ಬಗ್ಗೆ ಬಿಜೆಪಿ ಸಂಸದರು ಧ್ವನಿ ಎತ್ತುತ್ತಿಲ್ಲ” ಎಂದು
ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ, ಪ್ರತಿಪಕ್ಷದಿಂದ ಅವಿಶ್ವಾಸ ನಿರ್ಣಯ ಮಂಡನೆ ಸಿದ್ಧತೆ, ಸರ್ಕಾರದಿಂದ 33 ಮಸೂದೆ ಮಂಡನೆ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ವಿಧಾನ ಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಆಡಳಿತಾರೂಢ ಹಾಗೂ ಪ್ರತಿಪಕ್ಷ ಸದಸ್ಯರ ಮಧ್ಯೆ ಕಾವೇರಿದ ಚರ್ಚೆ, ಜಟಾಪಟಿ ನಡೆಯುವ ಸಾಧ್ಯತೆಗಳು ದಟ್ಟವಾಗಿವೆ. ಸರ್ಕಾರದಿಂದ 30ಕ್ಕೂ ಹೆಚ್ಚು ಮಸೂದೆಗಳು ಮಂಡನೆಯಾಗಲಿದ್ದು, ಒಂದಷ್ಟು ಮಸೂದೆಗಳು ಅಧಿವೇಶನದಲ್ಲಿ
ವಿಜಯೇಂದ್ರನನ್ನು ಅಧ್ಯಕ್ಷಗಿರಿಯಿಂದ ಇಳಿಸದಿದ್ದರೆ ಜೆಸಿಬಿ ಪಕ್ಷ ಕಟ್ಟುತ್ತೇನೆ: ಬಿಜೆಪಿಯ ಉಚ್ಚಾಟಿತ ಶಾಸಕ ಯತ್ನಾಳ
ಯಡಿಯೂರಪ್ಪನ ಚೇಲಾಗಿರಿ ಮಾಡಿ ಅಪ್ಪಾಜಿ ಎಂದು ಹೇಳುವುದಿಲ್ಲ. ನಾನು ಸ್ವಾಭಿಮಾನದಿಂದ ಇದ್ದೇನೆ. ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶದ ಯೋಗಿ ಆದಿತ್ಯನಾಥ, ಆರೆಸ್ಸೆಸ್ ನಮ್ಮ ಆದರ್ಶಗಳು. ಭ್ರಷ್ಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನವರನ್ನು ಅಧ್ಯಕ್ಷಗಿರಿಯಿಂದ ಇಳಿಸಿ, ಮನೆಯಲ್ಲಿ ಕೂರಿಸುವವರೆಗೆ ನಾನು ಬಿಜೆಪಿಗೆ ಹೋಗುವುದಿಲ್ಲ. ಜೆಸಿಬಿ
ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು: ಸಿಎಂ ಸಿದ್ದರಾಮಯ್ಯ
ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ ಬಗ್ಗೆ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ
ಖರೀದಿ ಮಾಡುವ ಶಕ್ತಿ ನನಗಿದೆ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಕೆ ಶಿವಕುಮಾರ್
ನನ್ನ ಶ್ರಮ, ಸಂಪಾದನೆ, ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ, ನಾನು ನನ್ನ ದುಡ್ಡಲ್ಲಿ ಎಷ್ಟು ವಾಚ್ ಬೇಕಾದರೂ ಖರೀದಿ ಮಾಡುತ್ತೇನೆ. ಖರೀದಿ ಮಾಡುವ ಶಕ್ತಿ ನನಗಿದೆ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.
ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿ ಕಿರುಕುಳ: ಡಿಕೆ ಶಿವಕುಮಾರ್ ಅಸಮಾಧಾನ
ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ
ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ಬಿ.ವೈ.ವಿಜಯೇಂದ್ರ
ಬೆಂಗಳೂರು: ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಜಗತ್ತೇ ಮೆಚ್ಚುವಂಥ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ನೀಡುವ ಪುಣ್ಯ ಕಾರ್ಯ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ




