Karnataka politics
ಒದ್ದು ಅಧಿಕಾರ ಕಿತ್ತುಕೊಳ್ಳುವ ಸಮಯವಿದು ಡಿಕೆಶಿಗೆ ಅಶೋಕ್ ಟಾಂಗ್
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಡಿಕೆಶಿಯ ಕಾಲೆಳೆದಿದ್ದಾರೆ. ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ.