Menu

ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು: ಸಿಎಂ ಸಿದ್ದರಾಮಯ್ಯ

ಅಹಿಂದ ವರ್ಗಗಳ ಸಂಘಟನೆಯಲ್ಲಿ ನನ್ನ ಕೊಡುಗೆಯಿದೆ, ಮಂಡ್ಯಕ್ಕೆ ಕುಮಾರಸ್ವಾಮಿಯವರ ಕೊಡುಗೆಗಳೇನು ಎಂದು ಅವರು ಸ್ಪಷ್ಟಪಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಅವರು  ಮಾತನಾಡಿದರು. ಅಹಿಂದ ವರ್ಗಕ್ಕೆ ಸಿದ್ದರಾಮಯ್ಯನವರ ಕೊಡುಗೆಯ ಬಗ್ಗೆ ಪ್ರಶ್ನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅಹಿಂದ ವರ್ಗಗಳ ಸಂಘಟನೆಯಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದು, ಅವರಿಗೆ ಗ್ಯಾರಂಟಿ ಹಾಗೂ ಅನೇಕ ಭಾಗ್ಯಯೋಜನೆಗಳನ್ನು ನೀಡಿದ್ದೇವೆ. ಕಾರ್ಮಿಕರು, ಬಡವರು, ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ

ಖರೀದಿ ಮಾಡುವ ಶಕ್ತಿ ನನಗಿದೆ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿಕೆ ಶಿವಕುಮಾರ್

ನನ್ನ ಶ್ರಮ, ಸಂಪಾದನೆ, ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ, ನಾನು ನನ್ನ ದುಡ್ಡಲ್ಲಿ ಎಷ್ಟು ವಾಚ್ ಬೇಕಾದರೂ ಖರೀದಿ ಮಾಡುತ್ತೇನೆ. ಖರೀದಿ ಮಾಡುವ ಶಕ್ತಿ ನನಗಿದೆ ಡಿಕೆ ಶಿವಕುಮಾರ್  ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು.

ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿ ಕಿರುಕುಳ: ಡಿಕೆ ಶಿವಕುಮಾರ್ ಅಸಮಾಧಾನ

ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ, ಇದನ್ನು ನಾನು ಖಂಡಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ತಮ್ಮ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಜಗತ್ತೇ ಮೆಚ್ಚುವಂಥ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ನೀಡುವ ಪುಣ್ಯ ಕಾರ್ಯ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ

ಕಮಿಷನ್ ದಂಧೆಯಲ್ಲಿ ಸಂಪೂರ್ಣ ಮುಳುಗಿದ ರಾಜ್ಯ ಸರ್ಕಾರ: ಆರ್‌ ಅಶೋಕ

ಬೆಂಗಳೂರು: 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ @INCKarnataka ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ.  ಸ್ವಾಮಿ ಸಿಎಂ @siddaramaiah ನವರೇ ಹಾಗು ಡಿಸಿಎಂ

ಶಿವನ ಮುಡಿಗೇರಿದ ಹೂವು ಪಾದಕ್ಕೆ ಬೀಳಲೇಬೇಕು: ಸಿಎಂ ಸ್ಥಾನದ ಬಗ್ಗೆ ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಂಗಳೂರು: ಶಿವನ ಮುಡಿ ಸೇರಿದ ಹೂವು ಶಿವನ ಪಾದಕ್ಕೆ ಬೀಳಲೇಬೇಕು ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಈ ಮೂಲಕ ಸಂಕ್ರಾಂತಿ ನಂತರ ರಾಜ್ಯದಲ್ಲಿ ಸಿಎಂ ಸ್ಥಾನದ ಬದಲಾವಣೆ ಖಚಿತ ಎಂದು ಸುಳಿವು ನೀಡಿದ್ದಾರೆ. ಮಂಡ್ಯದ ಕೆಆರ್ ಪೇಟೆಯಲ್ಲಿ ಮಂಗಳವಾರ

ಅಧಿಕಾರಕ್ಕಾಗಿ ಜಾತಿ, ಧರ್ಮದ ಹೆಸರು ಬಳಕೆ ಸರಿಯಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೆ, ಅಧಿಕಾರ ಹೋದಾಗ ನಾನು ಮಠಾಧೀಶರು, ಸಮುದಾಯದ ನೆರವು ಕೇಳಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗ ಸ್ವಾಮೀಜಿಗಳ ಬೆಂಬಲ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಎರಡು

ಅಧಿಕಾರ ಹಂಚಿಕೆ ಗೊಂದಲ ಬಗ್ಗೆ ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ: ಪ್ರಿಯಾಂಕ್ ಖರ್ಗೆ

ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ ನಡೆಯಲಿದ್ದು, ಆಗ ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ದೆಹಲಿಗೆ ಭೇಟಿ ನೀಡಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ತೆರಳುವ ಮುನ್ನ

ಸಿಎಂ ಕುರ್ಚಿ ಜಗಳದಲ್ಲಿ ರೈತರನ್ನು ಮರೆತ ಸರ್ಕಾರ: ಆರ್.ಅಶೋಕ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ

ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ಅಪ್ಪ-ಮಕ್ಕಳು ಬಿಡುತ್ತಿರಲಿಲ್ಲ: ಸಿದ್ದರಾಮಯ್ಯ

ಚಾಮರಾಜನಗರ: ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗಲು ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ಗುರುವಾರ 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಮಾಡನಾಡಿದ ಅವರು, ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು