Menu

ವಿಷ್ಣುವರ್ಧನ್, ಬಿ. ಸರೋಜಾದೇವಿಗೆ ಕರ್ನಾಟಕ ರತ್ನ ಪ್ರಶಸ್ತಿ: ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ಕಲಾವಿದರಾದ ದಿ. ವಿಷ್ಣುವರ್ಧನ್ ಮತ್ತು ನಟಿ ಬಿ.ಸರೋಜಾದೇವಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕನ್ನಡ ಚಿತ್ರರಂಗದ ಇಬ್ಬರು ಮೇರು ಕಲಾವಿದರಿಗೆ ಪ್ರತಿಷ್ಠಿತ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ್, ಕನ್ನಡ ಚಿತ್ರರಂಗಕ್ಕೆ ನೀಡಿದ ಅಮೋಘ ಸೇವೆಯನ್ನು