karnataka
ಸಹಕಾರ ಸಂಘ ಹಿರಿಯ ನಿರೀಕ್ಷಕರ 126 ಹುದ್ದೆ,ನಿರೀಕ್ಷಕರ 403 ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲು ಮುಖ್ಯಮಂತ್ರಿ ಸೂಚನೆ
ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಮಾತನಾಡಿದರು. ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ
ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಕೆ ಶಿವಕುಮಾರ್
“ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್ ಅವರ ಸಾಮಾಜಿಕ ಜಾಲತಾಣದಲ್ಲಿನ
ಸಣ್ಣ ಕೈಗಾರಿಕೆಗಳೇ ಸರ್ಕಾರದ ಶಕ್ತಿ: ಡಿ.ಕೆ. ಶಿವಕುಮಾರ್
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹತ್ತಾರು ಜನರಿಗೆ ಉದ್ಯೋಗ ನೀಡುವ ಮೂಲಕ ಅವರ ಬದುಕಿಗೆ ಆಸರೆ ಯಾಗಿವೆ. ಜತೆಗೆ ಸರ್ಕಾರಗಳಿಗೂ ಶಕ್ತಿ ತುಂಬುತ್ತಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲಿ ನಡೆದ ಸಣ್ಣ ಕೈಗಾರಿಕೆಗಳ ಸಂಘಗಳ ಒಕ್ಕೂಟದ (KASSIA) “ವಜ್ರ
ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳವಿಲ್ಲ: ಶರಣ್ ಪ್ರಕಾಶ್ ಪಾಟೀಲ್
ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ
ಬಿಡದಿ ಟೌನ್ ಶಿಪ್ ಯೋಜನೆ ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ: ಆರ್.ಅಶೋಕ
ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆ ಎಂಬುದು ಕಾಂಗ್ರೆಸ್ ನಾಯಕರು ಲೂಟಿ ಮಾಡಲು ರೂಪಿಸಿದ ಯೋಜನೆ. ಇದರಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಯಾವುದೇ ಪಾತ್ರವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಮಾಡುತ್ತಿರುವ ಭೂ ಸ್ವಾಧೀನ ವಿರೋಧಿಸಿ
ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ತಲಾ ₹2,000 ಹೆಚ್ಚಳ!
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಅವರ ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ
10 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂ. ಮಂಜೂರು ಮಾಡಿದ ರಾಜ್ಯ ಸರ್ಕಾರ
ವಿಜಯಪುರ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹತ್ತು ಮಹಾನಗರ ಪಾಲಿಕೆಗಳಿಗೆ ಕಾಂಗ್ರೆಸ್ ಸರ್ಕಾರ ತಲಾ 200 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಹಾನಗರ ಪಾಲಿಕೆ ಪ್ರಗತಿ ಪರಿಶೀಲನೆ
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ 2 ಸಾವಿರ ರೂ. ಏರಿಕೆ
ರಾಜ್ಯದ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಮಾಸಿಕವಾಗಿ ತಲಾ ₹2,000 ಗಳಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು
ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ, ಜನಾಭಿಪ್ರಾಯಗಳಿಗೆ ಮನ್ನಣೆ: ಸಿಎಂ
ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ . ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು. ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು. ನೀತಿ ಯೋಜನೆ ಸಮಿತಿಗಳ ಆಯ್ಕೆ
ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳು ಕಾಂಗ್ರೆಸ್ ಕಚೇರಿಯಲ್ಲಿ ಐಟಿ ಸೆಲ್ ನಡೆಸ್ತಿದ್ದಾರಾ: ಆರ್. ಅಶೋಕ
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳು ನಿಮ್ಮ ಕಾಂಗ್ರೆಸ್ ಕಚೇರಿಯಲ್ಲಿ ಐಟಿ ಸೆಲ್ ನಡೆಸುತ್ತಿದ್ದಾರಾ ಸಚಿವ ಪ್ರಿಯಾಂಕ್ ಖರ್ಗೆಯವರೇ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಪ್ರಶ್ನಿಸಿದ್ದಾರೆ. ಪಹಲ್ಗಾಂ ಗೆ ಬಂದಿದ್ದ ನಾಲ್ವರು ಉಗ್ರರು ಎಲ್ಲಿ ಎಂಬ ಪ್ರಿಯಾಂಕ್ ಖರ್ಗೆ




