Menu

ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌

ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಕಡೆಗಳಲ್ಲಿ ಗುರುವಾರ ಬೆಳಿಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದೆ. ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟ ಏಳು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅಧಿಕಾರಿಗಳಾದ ಟಿ.ವಿ.ಮುರಳಿ, ಹೆಚ್‌.ಆರ್‌.ನಟರಾಜ್‌ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಅನಂತ್‌ಕುಮಾರ್‌ಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಖಾರಿಗಳು ದಾಖಲೆಗಳನ್ನು ಪರಿಶೀಲನೆ

ಬಿ-ಖಾತಾ ವಿತರಣೆ ಅವಧಿ 3 ತಿಂಗಳವರೆಗೆ ವಿಸ್ತರಣೆ: ಸಚಿವ ಬಿ.ಎಸ್.ಸುರೇಶ

ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ

ಬಿಬಿಎಂಪಿ ಇಂದಿನಿಂದ ಗ್ರೇಟರ್‌ ಬೆಂಗಳೂರು: ಆದೇಶ ಜಾರಿ

ಬಿಬಿಎಂಪಿಯಾಗಿದ್ದ ಬೆಂಗಳೂರನ್ನು ಗ್ರೇಟರ್‌ ಬೆಂಗಳೂರನ್ನಾಗಿ ಪರಿವರ್ತನೆ ಮಾಡಿರುವ ಆದೇಶ ಹೊರ ಬಿದ್ದಿದ್ದು, ಆದೇಶದಲ್ಲಿ ಗುರುವಾರ (ಇಂದು)ದಿಂದಲೇ ಗ್ರೇಟರ್‌ ಬೆಂಗಳೂರು (ಜಿಬಿಎ)ಆಡಳಿತ ಜಾರಿಗೆ ಬರುತ್ತಿದೆ . ನಗರ ಪಾಲಿಕೆ, ಮಹಾನಗರ ಪಾಲಿಕೆ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಾಗಿದ್ದ ಬೆಂಗಳೂರು ಗುರುವಾರದಿಂದ ಗ್ರೇಟರ್‌ ಬೆಂಗಳೂರಾಗುತ್ತಿದೆ.

ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು: ಪ್ರಿಯಾಂಕ್‌ ಖರ್ಗೆ

ಏಪ್ರಿಲ್ 22ರಂದು ಪೆಹಲ್ಗಾಮ್‌ನಲ್ಲಿ ದಾಳಿ ನಡೆದಾಗ ಪ್ರಧಾನಿ ಮೋದಿ ಬಿಹಾರ ಚುನಾವಣೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಜಮ್ಮು ಕಾಶ್ಮೀರ, ಆದಂಪುರ ಸೇರಿದಂತೆ ಎಲ್ಲೆಡೆ ಬ್ಲಾಕ್‌ಔಟ್ ಆಗಿದ್ದಾಗ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು ಎಂದು ಐಟಿ-ಬಿಟಿ ಸಚಿವ

ರಾಜ್ಯದ ಹಲವೆಡೆ ಇವತ್ತೂ ಮಳೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ನಿನ್ನೆ ರಾಜ್ಯ ಬಹುತೇಕ ಕಡೆ ಭಾರೀ ಮಳೆ ಸುರಿದಿದ್ದು, ಇಂದು ಕೂಡ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ದಕ್ಷಿಣ ಕನ್ನಡ, ಚಾಮರಾಜನಗರ,ಬೀದರ್, ಬಿಜಾಪುರ, ಬಾಗಲಕೋಟೆ, ಉಡುಪಿ

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ 6 ಸಾವು

ರಾಜ್ಯದ ವಿವಿಧೆಡೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿದಂತೆ 6 ಮಂದಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ರಾರಾವಿ ಗ್ರಾಮದ ನಿವಾಸಿಗಳಾದ ಬೀರಪ್ಪ

ಆಪರೇಷನ್ ಸಿಂಧೂರ ಯಶಸ್ವಿಗೊಳಿಸಿದ ಸೇನೆಗೆ ಮಂತ್ರಾಲಯದಿಂದ 25 ಲಕ್ಷ ದೇಣಿಗೆ

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತವು ‘ಆಪರೇಷನ್ ಸಿಂಧೂರʼ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಯಶಸ್ಸು ಸಾಧಿಸಿದೆ. ಈ ಹಿನ್ನೆಲೆ ಯಲ್ಲಿ ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು

ಬೋರ್‌ವೆಲ್‌ಗಳಿಗೆ ಅಂತರ್ಜಲ ಪ್ರಾಧಿಕಾರದ ಅನುಮತಿ ಕಡ್ಡಾಯ

ರಾಜ್ಯದಲ್ಲಿ ಅಂತರ್ಜಲ ಮೂಲಗಳ ಅತಿ ಬಳಕೆಯಿಂದಾಗಿ ಅಂತರ್ಜಲ ಮಟ್ಟ ಗಮನಾರ್ಹವಾಗಿ ಕುಸಿದಿದೆ. ಹೀಗಾಗಿ ಅಂತರ್ಜಲ ನಿರ್ದೇಶನಾಲಯ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರ ರಾಜ್ಯದ ಎಲ್ಲಾ ಇಲಾಖೆಗಳಿಗೆ ಮತ್ತೊಮ್ಮೆ ಸೂಚನಾ ಪತ್ರ ಕಳುಹಿಸಿದ್ದು, ನಿರ್ಮಾಣ ಚಟುವಟಿಕೆಗಳಿಗೆ ಅಂತರ್ಜಲವನ್ನು ಬಳಸಲು ‘ಆಕ್ಷೇಪಣಾ ಪ್ರಮಾಣಪತ್ರ’ ಅಥವಾ

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ 2 ವರ್ಷದ ಸಂಭ್ರಮಾಚರಣೆ

ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಎರಡನೇ ವರ್ಷಾಚರಣೆ ಸಂಭ್ರಮವನ್ನು ಮುಂದೂಡಲು ಆಲೋಚನೆ ಮಾಡಿದ್ದೆವು. ಆದರೆ ಈಗ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿದ್ದೇವೆ. ಐದಾರು ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕಾರ್ಯಕರ್ತರು

ಕಂದಾಯ ಭೂಮಿಯಲ್ಲಿ ವಾಸವಿರುವ  ಹಟ್ಟಿ,‌ ತಾಂಡಾಗಳ 1 ಲಕ್ಷ ಜನರಿಗೆ‌ ಪಟ್ಟಾ ಖಾತೆ

“ಕಾಂಗ್ರೆಸ್ ‌ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.20 ರಂದು ವಿಜಯನಗರದಲ್ಲಿ ನಡೆಯುವ ಸಮಾವೇಶದಲ್ಲಿ ತಾಂಡಾ,‌‌ ಹಟ್ಟಿ ಸೇರಿದಂತೆ ಕಂದಾಯ ಭೂಮಿಯಲ್ಲಿ ವಾಸವಿರುವ 1 ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಘೋಷಿಸಿದ್ದಾರೆ. ರಾಮನಗರದಲ್ಲಿ ನಡೆದ ಜಿಲ್ಲಾ