karnataka
ಆಪರೇಷನ್ ಸಿಂಧೂರ್: ‘ಭಾರತ ಕ್ಷಮಿಸಲ್ಲ, ಮರೆಯಲ್ಲ’ ಅಂದ್ರು ನಟ ಕಿಚ್ಚ ಸುದೀಪ್
ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿ ಪಹಲ್ಗಾಮ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರಿಗೆ ನ್ಯಾಯವನ್ನು ಒದಗಿಸಿದೆ ಎಂದು ಎಲ್ಲೆಡೆಯಿಂದ ಅಭಿನಂದನೆಗಳು ಸಲ್ಲುತ್ತಿವೆ. ಕನ್ನಡ ಚಿತ್ರ ರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಸಂದರ್ಭದಲ್ಲಿ ಭಾರತೀಯ ಸೇನೆಗೆ ಗೌರವ ಸಲ್ಲಿಸಿ, ‘ಭಾರತ ಕ್ಷಮಿಸಲ್ಲ, ಮರೆಯಲ್ಲ’ ಎಂಬ ಸಾಲನ್ನು ಸಾಮಾ ಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. As an
“ಆಪರೇಷನ್ ಸಿಂಧೂರ್” ಬಳಿಕ ರಾಜ್ಯದ ಡ್ಯಾಂ, ಏರ್‌ಪೋರ್ಟ್‌ಗಳಿಗೆ ಬಿಗಿ ಭದ್ರತೆ: ಸಚಿವ ಪರಮೇಶ್ವರ್
ಭಾರತದ ವಾಯುಪಡೆಯು ಉಗ್ರರ ತಾಣಗಳ ಮೇಲೆ “ಆಪರೇಷನ್ ಸಿಂಧೂರ್” ಕಾರ್ಯಾಚರಣೆ ನಡೆಸಿದ ಬಳಿಕ ಕೇಂದ್ರ ಸರ್ಕಾರದ ಸೂಚನೆಯನ್ವಯ ರಾಜ್ಯದಲ್ಲೂ ನಾಗರಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ರಾಜ್ಯದ ವಿಮಾನ ನಿಲ್ದಾಣಗಳು ಮತ್ತು ಡ್ಯಾಮ್‌ಗಳಿಗೆ ಹೆಚ್ಚಿನ ಭದ್ರತೆ
ಅಂಬೇಡ್ಕರ್ ಬರೆದಿದ್ದ ಪತ್ರ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆ, ಛಲವಾದಿಯ ರಾಜೀನಾಮೆಗೆ ಒತ್ತಾಯ
ಸಾವರ್ಕರ್ ಅವರೇ ತಮ್ಮ ಸೋಲಿಗೆ ಕಾರಣ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಕಮಲಕಾಂತ್ ಎನ್ನುವವರಿಗೆ ಬರೆದಿರುವ ಕೈಬರಹದ ಪತ್ರ ಬಿಡುಗಡೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರ ಸವಾಲಿಗೆ ತಿರುಗೇಟು ನೀಡಿ ಸವಾಲಿನಂತೆ ನಾರಾಯಣಸ್ವಾಮಿ
ರಾಜ್ಯದ ಮೂರು ಜಿಲ್ಲೆಗಳಲ್ಲಿ ಡಿಫೆನ್ಸ್ ಮಾಕ್ ಡ್ರಿಲ್
ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ. ಕರ್ನಾಟಕದ ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧರಿಸಲಾಗಿದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್
ವೀಡಿಯೊ ಪೋಸ್ಟ್ ಮಾಡಿ ಸಿಎಂಗೆ ಅವಹೇಳನಗೈದ ಪೇದೆ ಅಮಾನತು
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ಪೋಸ್ಟ್ ಮಾಡಿದ್ದ ಕೇಂದ್ರ ಕಾರಾಗೃಹದ ಕಾನ್‌ಸ್ಟೆಬಲ್ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಸಿಎಂ ಅವರು ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ
ಒಂದೇ ಒಂದು ಗ್ರಾಮದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಆಗುವಂತಿಲ್ಲ: ಸಿಎಂ ಖಡಕ್ ಸೂಚನೆ
ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ
ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗೆ ಹೆಚ್ಚಿಸಲು ಸರ್ಕಾರ ಬದ್ಧ: ಡಿಕೆ ಶಿವಕುಮಾರ್
ಬೆಂಗಳೂರು,: ಆಲಮಟ್ಟಿ ಅಣೆಕಟ್ಟು ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ರಾಜ್ಯ ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, 2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ
ಮೇ ಆರರಿಂದ ರಾಜ್ಯಾದ್ಯಂತ ಭಾರೀ ಮಳೆ
ರಾಜ್ಯಾದ್ಯಂತ ಮೇ ಆರರಿಂದ ಭಾರಿ ಮಳೆಯಾಗಲಿದೆ, ಬೆಂಗಳೂರು ಸೇರಿ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಭಾನುವಾರ (ಇಂದು) ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಗಳಿಗೆ
ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್ 60 ಸಾವಿರ ಕೋಟಿ ಮಾತ್ರ: ಸಿಎಂ
ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಶೇ50 ರಷ್ಟು ತೆರಿಗೆ ರಾಜ್ಯಗಳಿಗೆ ವಾಪಾಸ್ ಕೊಡಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಈಗ ಇವರೇ ಪ್ರಧಾನಿ ಆದಾಗ ರಾಜ್ಯಗಳಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೆ ಒಳಗಾಗಿರುವ ದಕ್ಷಿಣದ ರಾಜ್ಯಗಳ ಜೊತೆ ಸೇರಿ ಅನ್ಯಾಯದ
ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಅಂತ ಒಂದೇ ಪದದಲ್ಲಿ ಹೇಳಿದ್ದಾರೆ. ಆದರೆ, ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ. ಬಸವಣ್ಣನ ತತ್ವ ಪಾಲಿಸಿದರೆ ನಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ




