karnataka
ರಾಜ್ಯದಲ್ಲಿ ಅಕ್ರಮ ಶಾಲೆಗಳಿಗೆ ಸಕ್ರಮ ಅವಕಾಶ
ಬೆಂಗಳೂರು: ರಾಜ್ಯದಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ಖಾಸಗಿ ಶಾಲೆಗಳನ್ನು ಸಕ್ರಮಗೊಳಿಸಲು ಸರ್ಕಾರವು ಅವಕಾಶ ಕಲ್ಪಿಸಿದೆ. 2023-24 ಮತ್ತು ಅದಕ್ಕೂ ಹಿಂದಿನ ವರ್ಷಗಳಲ್ಲಿ ಮಾನ್ಯತೆಯೇ ಇಲ್ಲದೆ ಅಥವಾ ಮಾನ್ಯತೆ ನವೀಕರಣ ಮಾಡಿಕೊಳ್ಳದೆ ನಡೆಯುತ್ತಿರುವ ಖಾಸಗಿ ಶಾಲೆಗಳು ಬಾಕಿ ಇರುವ ಹಿಂದಿನ ಎಲ್ಲ ವರ್ಷಗಳಿಗೆ ಮತ್ತೆ ಅರ್ಜಿ ಸಲ್ಲಿಸಿ ಮಾನ್ಯತೆ/ನವೀಕರಣ ಪಡೆಯಲು ಅವಕಾಶ ನೀಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಾಲಮಿತಿಯಲ್ಲಿ ಹೊಸ ಮಾನ್ಯತೆ, ಮಾನ್ಯತೆ ನವೀಕರಣಕ್ಕೆ ಆನ್‌ಲೈನ್ ತಂತ್ರಾಂಶದ ಮೂಲಕ ಅಕ್ರಮ
ಯುದ್ಧವೇ ಬೇಡ ಎಂದು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು: ದೇಶದ ಸಾರ್ವಭೌಮತೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ: ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಬೀತು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು. ದೇವನಹಳ್ಳಿಯಲ್ಲಿ ಭಾನುವಾರ
ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ– 2024 ಜಾರಿ
ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಕೆದಾರರಿಗೆ ಡಿಜಿಟಲ್ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ – 2024 ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರವು ಡಿಜಿಟಲ್
ಜಾತ್ಯತೀತ ವ್ಯವಸ್ಥೆಯಲ್ಲಿ ಜಾತಿಗಣತಿ: ಹಲವು ಸಂದೇಹಗಳಿಗೆ ಉತ್ತರ ಬೇಕಿದೆ
ಈಗ ಮಾಧ್ಯಮದಲ್ಲಿ ಹರಿದಾಡುವ ಅಂಕೆ ಸಂಖ್ಯೆಗಳು ಮತ್ತು ಇತರ ಮಾಹಿತಿಗಳು ಸೋರಿಕೆಯಾದ ವರದಿಯಿಂದ ಹೊರಬಂದಿದ್ದು, ಇದರ ಮೇಲೆ ಅಭಿಪ್ರಾಯ ವನ್ನು ಮಾಡಲಾಗದು. ಒಂದು ದೃಢವಾದ ಅಭಿಪ್ರಾಯವನ್ನು ರೂಪಿಸಬೇಕಿದ್ದರೆ ಅಧಿಕೃತ ವರದಿಗಾಗಿ ಸ್ವಲ್ಪದಿನ ಕಾಯಲೇಬೇಕು. ಸದ್ಯದ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ವರದಿಯು
ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ಕುಟುಂಬಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸಾಂತ್ವನ
ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಹತ್ಯೆಯಾದ ಶಿವಮೊಗ್ಗದ ನಿವಾಸಿ ಮಂಜುನಾಥ್ ಅವರ ಕುಟುಂಬ ಸದಸ್ಯರಿಗೆ ದೂರವಾಣಿ ಕರೆ ಮಾಡಿ ಡಿಸಿಎಂ ಡಿ.ಕೆ. ಶಿವಕುಮಾರ್ ಸಾಂತ್ವನ ಹೇಳಿದರು. “ಮಂಜುನಾಥ್ ಅವರ ಭಾವಮೈದ ಡಾ. ರವಿಕಿರಣ್ ಅವರನ್ನು ಬುಧವಾರ
ಕೆರೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಿ: ಸಿಎಂ ಸೂಚನೆ
ಬೆಂಗಳೂರು: ಖಾಸಗಿಯವರಿಂದ ಒತ್ತುವರಿಯಾಗಿರುವ ಕೆರೆ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ಕೆರೆ ಸಂರಕ್ಷಣಾ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ವಿವಿಧ ಇಲಾಖಾವಾರು
ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲ ಎಂದು ಹೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ
ಮಂಡ್ಯ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ನೀಡಿದ ವರದಿ ಸರಿಯಿಲ್ಲವೆಂದು ಹೇಳಲು ಬಿಜೆಪಿಯವರಿಗೆ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯ ಜಿಲ್ಲೆಯ ನಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ
ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನ ಬಗೆಹರಿಸುವ ಶಕ್ತಿ ಸರ್ಕಾರಕ್ಕಿದೆ: ಡಿಕೆ ಸುರೇಶ್
ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮುಂದಿದೆ. ಈ ಅನುಮಾನಗಳಿಗೆ ತೆರೆ ಎಳೆಯುವ ಶಕ್ತಿ ಸರ್ಕಾರಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ಸುದೀರ್ಘವಾಗಿ ಚರ್ಚಿಸಿ ಈ ಕೆಲಸ ಮಾಡಲಿದ್ದಾರೆ” ಎಂದು ಮಾಜಿ
ರಸ್ತೆ ಅಪಘಾತದಲ್ಲಿ ಮೃತರ ವಯಸ್ಕ ಮಕ್ಕಳಿಗೆ ಪರಿಹಾರ ನಿರಾಕರಣೆ ಸಲ್ಲದು: ಹೈಕೋರ್ಟ್
ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕ ಮಕ್ಕಳು ಕೂಡ ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಆದೇಶ ಪ್ರಕಟಿಸಿದೆ. ವಯಸ್ಕರೆಂಬ ಕಾರಣ ನೀಡಿ ಮೃತರ ಮಕ್ಕಳಿಗೆ ಪರಿಹಾರ ನೀಡುವುದಕ್ಕೆ ನಿರಾಕರಿಸಿದ್ದ ನ್ಯಾಯಾಧಿಕರಣದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ
‘ಜನಿವಾರ’ ಪ್ರಕರಣಕ್ಕೆ ಕೇಂದ್ರದ ಪರೀಕ್ಷಾ ಪ್ರಾಧಿಕಾರಗಳ ನೀತಿ ಕಾರಣ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಜನಿವಾರ ಪ್ರಕರಣದಂತಹ ಘಟನೆ ನಡೆಯಲು ಕೇಂದ್ರ ಸರಕಾರದ ಪರೀಕ್ಷಾ ಪ್ರಾಧಿಕಾರಗಳ ನೀತಿಗಳು ಕಾರಣ. ಹೀಗಾಗಿ, ಇಂತಹ ನೀತಿಗಳ ಸಡಿಲಿಕೆಗೆ ಕೇಂದ್ರಕ್ಕೆ ಮನವಿ ಮಾಡಿಕೊಳ್ಳಬೇಕು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸಲಹೆ ನೀಡಿದ್ದಾರೆ. ಉನ್ನತ ಶಿಕ್ಷಣ ಸಚಿವರಿಗೆ




