Menu

50 ಕೋಟಿಯ ಶ್ವಾನ ಖರೀದಿಸಿದ ಬೆಂಗಳೂರಿನ ಸತೀಶ್ ಇಡಿ ವಶಕ್ಕೆ

ಬೆಂಗಳೂರು: ಬರೋಬರಿ 50 ಕೋಟಿ ರೂ ನೀಡಿ ವಿಶ್ವದಲ್ಲೇ ದುಬಾರಿಯಾಗಿರುವ ಶ್ವಾನ ನಾಯಿಯೊಂದನ್ನು ಖರೀದಿ ಮಾಡಿದ್ದೇನೆ ಎಂದು ಹೇಳುತ್ತಿದ್ದ ನಗರದ ಶ್ವಾನಪ್ರೇಮಿ ಸತೀಶ್‌ ಅವರ ನಗರದ ಮನೆ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೆಪಿ ನಗರ ಮೂರನೇ ಹಂತದಲ್ಲಿರುವ ಸತೀಶ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯ ಬೆಲೆ 50 ಕೋಟಿ ಎನ್ನುವುದು ಸುಳ್ಳು ಎಂಬುದು

ಜಾತಿಗಣತಿಗೆ ಸಚಿವರಿಂದಲೇ ವಿರೋಧ: ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರಲು ವಿಫಲ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಜಾತಿಗಣತಿಯ ಕುರಿತು ಗುರುವಾರ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿಯ ವಿಷಯ ಮತ್ತೆ ಚರ್ಚೆ ಬರಲಿದೆ, ಹಲವು ಸಚಿವರು

ರಾಜ್ಯ ಸರ್ಕಾರದ ಸಂಧಾನ ಯಶಸ್ವಿ: ಲಾರಿ ಮಾಲೀಕರ ಮುಷ್ಕರ ವಾಪಸ್

ಬೆಂಗಳೂರು: ಸರ್ಕಾರ ಹಾಗೂ ಲಾರಿ ಮಾಲೀಕರ ನಡುವಿನ ಸಂಧಾನ ಯಶಸ್ವಿಯಾದ ಹಿನ್ನೆಲೆಯಲ್ಲಿ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಲಾರಿ ಮಾಲೀಕರ ಮುಷ್ಕರ ವಾಪಾಸ್ ಪಡೆಯಲಾಗಿದೆ. ಮೂರು ದಿನಗಳಿಂದ ನಡೆಯುತ್ತಿದ್ದ ಲಾರಿ ಮುಷ್ಕರದ ಬಗ್ಗೆ ಗುರುವಾರ

ಲಾರಿ ಮುಷ್ಕರ ಮೂರನೇ ದಿನಕ್ಕೆ, ಸರಕು ಸಾಗಣೆಯಲ್ಲಿ ವ್ಯತ್ಯಯ

ಡಿಸೇಲ್ ಬೆಲೆ ಹೆಚ್ಚಳ ವಿರೋಧಿಸಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಲಾರಿ ಮಾಲೀಕರು ನಡೆಸುತ್ತಿರುವ ಲಾರಿ ಮುಷ್ಕರವು ಮೂರನೇ ದಿನಕ್ಕೆ ಕಾಲಿರಿಸಿದೆ. ಅಗತ್ಯ ವಸ್ತುಗಳ ಪೂರೈಕೆಯ ಮೇಲೆ ಪರಿಣಾಮ ಬೀರಿದೆ. ಅಲ್ಲದೆ, ಬೆಲೆ ಏರಿಕೆ ಬಿಸಿ ಕೂಡ ಜನರಿಗೆ ತಟ್ಟಲು

ಜಾತಿಗಣತಿ ವಿಚಾರವಾಗಿ ವಿರೋಧ ಪಕ್ಷಗಳ ಗೊಂದಲಕ್ಕೆ ತಕ್ಕ ಉತ್ತರ: ಡಿ.ಕೆ. ಶಿವಕುಮಾರ್

ಕೆಲವು ಮಾಧ್ಯಮಗಳಲ್ಲಿ ಹಾಗೂ ವಿರೋಧ ಪಕ್ಷದವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಅದಕ್ಕೆ ನಾವು ಸೂಕ್ತ ಉತ್ತರ ನೀಡುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಜಾತಿಗಣತಿ ವರದಿಯ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ

ಎಐ, ಕ್ವಾಂಟಂ, ಸೈಬರ್ ಸೆಕ್ಯುರಿಟಿ ಸಹಕಾರಕ್ಕೆ ಬವೇರಿಯಾ ಜತೆ ರಾಜ್ಯದ ಒಡಂಬಡಿಕೆ

ಎಐ, ಕ್ವಾಂಟಂ ತಂತ್ರಜ್ಞಾನ, ಬಿಟಿ, ಸ್ಮಾರ್ಟ್ ಸಿಟಿ, ಉನ್ನತ ಶಿಕ್ಷಣ ಮತ್ತು ಸುಸ್ಥಿರ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರದ ಉದ್ದೇಶದಿಂದ ಜರ್ಮನಿಯ ಬವೇರಿಯಾ ಪ್ರಾಂತ್ಯ ಮತ್ತು ರಾಜ್ಯ ಸರಕಾರಗಳು  ಒಡಂಬಡಿಕೆಗೆ ಅಂಕಿತ ಹಾಕಿದವು. ರಾಜ್ಯ ಸರಕಾರದ ಪರವಾಗಿ ಬೃಹತ್

ಜಾತಿಗಣತಿ ವೈಜ್ಞಾನಿಕವಾಗಿಲ್ಲ, ಪಾರದರ್ಶಕತೆ ಇಲ್ಲವೆಂದ ಸಚಿವ ಸೋಮಣ್ಣ

ಜಾತಿ ಜನಗಣತಿ ವರದಿ ವರದಿ ಜಾರಿಯಾದ್ರೆ ರಾಜ್ಯದಲ್ಲಿ ಕೋಮುದಳ್ಳುರಿಗೆ ಕಾರಣವಾಗಬಹುದು. ಜಾತಿ ಜನ ಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ. ಜಾತಿ ಜನಗಣತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿ ಸಬೇಕು. ಇನ್ನೂ ಮೂರು ವರ್ಷ ಸಮಯ ಇದೆ, ಮತ್ತೊಂದು

ಜಾತಿ ಗಣತಿ ವೈಜ್ಞಾನಿಕವಾಗಿ ಆಗಿಲ್ಲ: ಆರ್‌.ಅಶೋಕ

ಜಾತಿ ಗಣತಿಯಲ್ಲಿ ಸಮೀಕ್ಷೆ ಮಾಡಿದ್ದವರು ಎಲ್ಲರ ಮನೆಗೆ ಹೋಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿ ಮಾಡಿಸಿ ರುವ ವರದಿ. ಇದರಲ್ಲಿ ರಾಜಕೀಯ ಇರುವುದರಿಂದ ಇದನ್ನು ಯಾರೂ ಒಪ್ಪಲ್ಲ. ನಾನು ಕೂಡ ಜಾತಿ ಗಣತಿ ಆಗಬೇಕು ಎನ್ನುತ್ತೇನೆ. ಆದರೆ ಯಾರಿಗೋ ಅನುಕೂಲ ಮಾಡಿಕೊಡಲು ಜಾತಿಜಾತಿಗಳ

ಪತ್ನಿ ಸಾವಿನಿಂದ ನೊಂದು ಇಬ್ಬರು ಮಕ್ಕಳ ಕೊಂದು ತಂದೆ ಆತ್ಮಹತ್ಯೆ

ದಾವಣಗೆರೆ: ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ದಾವಣಗೆರೆಯ ಎಸ್ ಪಿಎಸ್ ನಗರದಲ್ಲಿ ನಡೆದಿದೆ. ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್‌ (3)ನನ್ನು ಕೊಲೆಗೈದು ಬಳಿಕ ತಂದೆ ಉದಯ್‌ (35) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕಾರು ಬ್ರಿಡ್ಜ್ ಗೆ ಡಿಕ್ಕಿ ಒಂದೇ ಕುಟುಂಬದ ಮೂವರು ಸಾವು; ಮಕ್ಕಳು ಪಾರು

ಬೆಂಗಳೂರು:ವೇಗವಾಗಿ ಹೋಗುತ್ತಿದ್ದ ಕಾರು ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಪತಿ, ಪತ್ನಿ, ಮಗಳು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟು ಇಬ್ಬರು ಮಕ್ಕಳು ಪಾರಾಗಿರುವ ದುರ್ಘಟನೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಲ್ಲೇಶ್ವರಂನ ಗೋಪಾಲ(60), ಇವರ ಪತ್ನಿ ಶಶಿಕಲಾ(54)