karnataka
ಜಾತಿಗಣತಿ ವರದಿ-2015 ಸಂಪುಟ ಸಭೆಯಲ್ಲಿ ನಾಳೆ ಮಂಡನೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿಗಣತಿ ವರದಿ-2015) ವರದಿಯು ನಾಳೆ (ಶುಕ್ರವಾರ) ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದ್ದು, ದತ್ತಾಂಶಗಳ ಅಧ್ಯಯನ ವರದಿ ಪರಿಶೀಲನೆ ಬಳಿಕ ಅನುಷ್ಠಾನ ಕುರಿತು ಸಚಿವ ಸಂಪುಟ ಸಭೆ ತೀರ್ಮಾನ ಮಾಡಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 169 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿಸಿರುವ ವರದಿಯನ್ನು ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿದ್ದು, ವರದಿಯಲ್ಲಿನ ಅಂಶಗಳ ಬಗ್ಗೆ, ದತ್ತಾಂಶಗಳನ್ನು ಅಧ್ಯಯನ ನಡೆಸಲು ಪ್ರತ್ಯೇಕ ಸಮಿತಿ ರಚಿಸಬೇಕೇ ಅಥವಾ
ಗಣಿ ಗುತ್ತಿಗೆ ನವೀಕರಣ ವಿವಾದ, ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪ್ರಯತ್ನ: ಸಿಎಂ ಸಿದ್ದರಾಮಯ್ಯ
ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು
ಮಾಜಿ ಸಚಿವ ಬಿ.ನಾಗೇಂದ್ರಗೆ 1.25 ಕೋಟಿ ದಂಡ ವಿಧಿಸಿದ ಕೋರ್ಟ್
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರಿಗೆ 1.25 ಕೋಟಿ ರೂ. ದಂಡ ವಿಧಿಸಿ 42ನೇ ಎಸಿಜೆಎಂ ನ್ಯಾಯಾಲಯ ಆದೇಶಿಸಿದೆ. 42ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಜಡ್ಜ್ ಕೆ.ಎನ್.ಶಿವಕುಮಾರ್ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ
ದ್ವಿತೀಯ ಪಿಯುಸಿ ಪರೀಕ್ಷೆ-2 ಮತ್ತು 3ರ ದಿನಾಂಕ ಪ್ರಕಟ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮಂಗಳವಾರ ಬಂದಿದ್ದು, ಪರೀಕ್ಷೆ-2 ಮತ್ತು 3 ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದು, ಪರೀಕ್ಷೆಗೆ ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಏಪ್ರಿಲ್ 24 ರಿಂದ ಮೇ 8ರವರೆಗೆ ದ್ವಿತೀಯ ಪಿಯುಸಿ 2 ಪರೀಕ್ಷೆ
ಲಾರಿ ಚಾಲಕನ ಪುತ್ರಿ ಕಲಾ ವಿಭಾಗದಲ್ಲಿ ಪ್ರಥಮ
ಬೆಂಗಳೂರು: ದ್ವಿತೀಯ ಪಿಯುಸಿಯ ಈ ಬಾರಿಯ ಫಲಿತಾಂಶದಲ್ಲಿ ಲಾರಿ ಚಾಲಕನ ಪುತ್ರಿಯೊಬ್ಬಳು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿರುವುದು ವಿಶೇಷ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಿಯು ಕಾಲೇಜಿನ ವಿದ್ಯಾರ್ಥಿನಿ ಸಂಜನಾಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 600ಕ್ಕೆ 597
ದೇಶದ ಮೊದಲ ಪ್ರತ್ಯೇಕ ಸೈಬರ್ ತನಿಖಾ ಘಟಕ ರಾಜ್ಯದಲ್ಲಿ ಕಾರ್ಯಾರಂಭ
ಸೈಬರ್ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಗೂ ತನಿಖೆಗಾಗಿ ಪ್ರತ್ಯೇಕವಾಗಿ ಸ್ಥಾಪಿಸಿರುವ ಸೈಬರ್ ತನಿಖಾ ಘಟಕಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಡಿಐಜಿಯಾಗಿ ಭೂಷಣ್ ಬೊರೆಸೆ ನೇಮಕಗೊಂಡಿದ್ದು, ಐಜಿಪಿ ಹಾಗೂ ಎಸ್ಪಿ ಸೇರಿ ದಂತೆ ಅಧಿಕಾರಿ-ಸಿಬ್ಬಂದಿ ನಿಯೋಜಿಸಲು ಸರ್ಕಾರ ಮುಂದಾಗಿದೆ. ಪ್ರಣವ್ ಮೊಹಂತಿ
ದ್ವಿತೀಯ ಪಿಯುಸಿ ಫಲಿತಾಂಶ: ಮೊದಲ, ಎರಡನೇ ಸ್ಥಾನ ಗಳಿಸಿದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ
2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು. 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ, ದಕ್ಷಿಣ ಕನ್ನಡ (93.57%) ಎರಡನೇ ಸ್ಥಾನ ಗಳಿಸಿವೆ. ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಯಾದಗಿರಿ (73.45%) ಕೊನೆಯ ಸ್ಥಾನದಲ್ಲಿದೆ. ರಾಜ್ಯದಲ್ಲಿ
ಜನಾಕ್ರೋಶ ಯಾತ್ರೆ ಪ್ರಹಸನ: ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಕಪಾಳಮೋಕ್ಷ
ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸುವ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳು ವಂತೆ ಕಪಾಳಮೋಕ್ಷ ಮಾಡಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ, ಬೆಲೆ
ಕೃಷ್ಣಾ -ಕಾವೇರಿ ಜಲಹಂಚಿಕೆಯಲ್ಲಿ ರಾಜ್ಯವೆಂದೂ ನೀರುಗಂಟಿಯೇ…!
ಕರ್ನಾಟಕದ ಜನತೆಯ ಪಾಲಿಗೆ ಆಲಮಟ್ಟಿ, ತುಂಗಭದ್ರಾ, ಕೆಆರ್‌ಎಸ್ ಅಣೆಕಟ್ಟುಗಳು ಕಾಮಧೇನುವಲ್ಲ, ಕಲ್ಪ ವೃಕ್ಷವೂ ಆಗಿಲ್ಲ. ಏಕೆಂದರೆ ನದಿದಂಡೆ ಮೇಲಿನ ಭಾಗದಲ್ಲಿರುವ ರಾಜ್ಯಕ್ಕೆ ಇದುವರೆಗೆ ಸಿಕ್ಕಿದ್ದು ಬೊಗಸೆ ನೀರು. ಆದರೆ ಆಂಧ್ರ ಮತ್ತು ತಮಿಳುನಾಡಿಗೆ ದೊರೆತಿದ್ದು ಹಂಡೆಯಷ್ಟು.. ಕೃಷ್ಣಾ – ಕಾವೇರಿ ನದಿ
ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ
ಮಳವಳ್ಳಿ/ಮಂಡ್ಯ: ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. ಮಳವಳ್ಳಿ ತಾಲೂಕಿನ




