karnataka
ರಾಯಚೂರು ಗ್ರೀನ್ ಫೀಲ್ಡ್ ಏರ್ಪೋರ್ಟ್ ಗೆ ಪರಿಸರ ಮಂತ್ರಾಲಯ ಗ್ರೀನ್ ಸಿಗ್ನಲ್
ಬೆಂಗಳೂರು: ರಾಯಚೂರಿನಲ್ಲಿ ನಿರ್ಮಿಸಲಾಗುತ್ತಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಪರಿಸರ ಮಂತ್ರಾಲಯ ಅನುಮತಿ ನೀಡಿದ್ದು ಬಹಳ ಸಂತಸದ ವಿಷಯವಾಗಿದೆ. ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಆಗಿರುವ ರಾಯಚೂರು ಜಿಲ್ಲೆಯಲ್ಲಿ ವಿಮಾನ ನಿಲ್ದಾಣದ ಕನಸು ನನಸಾಗುವ ಕಾಲ ಮತ್ತಷ್ಟು ಸಂಹಿತವಾಗಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವ ಎನ್ ಎಸ್ ಬೋಸರಾಜು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ರಾಯಚೂರು ನಗರದಲ್ಲಿ
24,000 ಕೋಟಿ ರೂ. ಯೋಜನೆಗಳಿಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ಬೆಂಗಳೂರು: ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣ ಸೇರಿದಂತೆ ವಿವಿಧ ರಸ್ತೆ ಯೋಜನೆಗಳಿಗೆ ಮುಂಬರುವ ಬಜೆಟ್ ನಲ್ಲಿ 24 ಸಾವಿರ ಕೋಟಿ ರೂ. ಮಂಜೂರು ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬುಧವಾರ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ
ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರು ಪೂರೈಕೆಗೆ ಆದ್ಯತೆ: ಡಿಸಿಎಂ
ಬೇಸಿಗೆ ಸಮಯದಲ್ಲಿ ಜನರಿಗೆ ಕುಡಿಯುವ ನೀರು ಪೂರೈಸುವುದು ನಮ್ಮ ಮೊದಲ ಆದ್ಯತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಪ್ರತಿನಿಧಿಗಳ ನಿಯೋಗವು ಜಲ
ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ದೊಡ್ಡದು: ಸಿಎಂ ಸಿದ್ದರಾಮಯ್ಯ
ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ: ಎಚ್ಚರಿಕೆ ನಿಜವಾಯ್ತು ಎಂದ ಆರ್. ಅಶೋಕ್
ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನಾನು ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ. ಬಜೆಟ್ ನಲ್ಲಿ ಯಾವುದೇ ತೆರಿಗೆ ಹೆಚ್ಚಳವನ್ನ, ಬೆಲೆ ಏರಿಕೆಯನ್ನ ಘೋಷಣೆ ಮಾಡದೆ ಕನ್ನಡಿಗರ ಕಿವಿಗೆ ಹೂವಿಟ್ಟ ಸಿಎಂ ಸಿದ್ದರಾಮಯ್ಯ ಅವರು ಈಗ
ಡಿಸೆಲ್ ದರ ಲೀಟರ್ ಗೆ 2 ರೂ. ಹೆಚ್ಚಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಹಾಲು, ನೀರು, ಬಸ್ ಸೇರಿದಂತೆ ಎಲ್ಲಾ ದರಗಳನ್ನು ಏರಿಸುತ್ತಿರುವ ರಾಜ್ಯ ಸರ್ಕಾರ ಇದೀಗ ಏಕಾಏಕಿ ಡೀಸೆಲ್ ಮೇಲಿನ ತೆರಿಗೆಯನ್ನು ಏರಿಕೆ ಮಾಡಿದ್ದು, ಏಪ್ರಿಲ್ 1ರಿಂದಲೇ ಲೀಟರ್ ಗೆ 2 ರೂ. ಜಾರಿಗೆ ಬರಲಿದೆ. ರಾಜ್ಯ ಸರ್ಕಾರ ಡೀಸೆಲ್ ಮೇಲಿನ ತೆರಿಗೆಯನ್ನು
ಹಾಲು, ಮೊಸರು, ಕಾಫಿ ಟೀ, ನೀರು, ವಿದ್ಯುತ್, ವಾಹನ ಶುಲ್ಕ ದರ ಹೆಚ್ಚಳ, ಕಸಕ್ಕೂ ಕಾಸು
ಬಸ್, ಮೆಟ್ರೋ ಟಿಕೆಟ್ ದರ ಹೆಚ್ಚಳದ ಬಳಿಕ ಹಾಲು, ಮೊಸರು, ವಿದ್ಯುತ್, ನೀರಿನ ದರ ದುಬಾರಿಯಾಗಿ ಪರಿಣಮಿಸುವ ಜೊತೆಗೆ ಕಸಕ್ಕೂ ನಾಗರಿಕರು ಸೆಸ್ ಕಟ್ಟಬೇಕಿದೆ. ಕಸ ಸಂಗ್ರಹ ಸೆಸ್ (ಮಾಸಿಕ)ದರ ಹೀಗಿದೆ, ವಸತಿ ಕಟ್ಟಡ: 600 ಚದರಡಿವರೆಗೆ – 10 ರೂ.,
₹3,500.86 ಕೋಟಿ ಬಂಡವಾಳ ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ
ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್‌ಜೆಂಟ್ಸ್ ಲಿಮಿಟೆಡ್‌ನ (ಕೆಎಸ್‌ಡಿಎಲ್) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು
ಆರ್ಥಿಕವಾಗಿ ದುರ್ಬಲರಿಗೆ ಒಳರೋಗಿಗಳಾಗಿ ಚಿಕಿತ್ಸೆ ನೀಡಲು ಸಚಿವ ಶರಣ್ ಪ್ರಕಾಶ್ ಪಾಟೀಲ್ ಸೂಚನೆ
ಬೆಂಗಳೂರು: ವೈದ್ಯಕೀಯ ತಪಾಸಣೆಗಾಗಿ ದೂರದ ಊರುಗಳಿಂದ ಪ್ರಯಾಣ ಮಾಡುವ, ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹೆಚ್ಚಿನ ಆರ್ಥಿಕ ಹೊರೆ ಹಾಕದೇ, ಅವರನ್ನು ಒಳರೋಗಿಗಳಾಗಿ ಸೇರಿಸಿಕೊಳ್ಳಬೇಕು ಎಂದು ಕಿದ್ವಾಯಿ ಆಡಳಿತ ಮಂಡಳಿ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸೂಚನೆ
ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇಗೆ 50 ಕೋಟಿ ರೂ. ನಿಗದಿ: ಸಚಿವ ಕೆಎನ್ ರಾಜಣ್ಣ
ಮಧುಗಿರಿಯ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ 50 ಕೋಟಿ ರೂ. ನಿಗದಿ ಮಾಡಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಪಟ್ಟಣದ ಸಿದ್ಧರಕಟ್ಟೆ ಸಮೀಪ ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲಿಸಿ




