karnataka
ರಾಜ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿವೇಶನದಲ್ಲಿ ಹೋರಾಟ: ಆರ್.ಅಶೋಕ
ರಾಜ್ಯದ ಎಲ್ಲ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ- ಜೆಡಿಎಸ್ ಜಂಟಿಯಾಗಿ ಅಧಿವೇಶನದಲ್ಲಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಅಧಿವೇಶನಕ್ಕೆ ಸಂಬಂಧಿಸಿದಂತೆ ಬಿಜೆಪಿ- ಜೆಡಿಎಸ್ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕೋಮುಗಲಭೆ ಹೆಚ್ಚಾಗಿದೆ. ಮೈಸೂರಿನಲ್ಲಿ ಇತ್ತೀಚೆಗೆ ಮುಸ್ಲಿಮರು ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್ ಗಳ ಸಾಲದ ಹೊರೆಯಿಂದಾಗಿ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಸಚಿವ ಕೆ.ಹೆಚ್.ಮುನಿಯಪ್ಪ ಮನವಿ
ನವದೆಹಲಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭ ಕರಂದ್ಲಾಜೆ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುದಾನ ನೀಡಿ: ಕೇಂದ್ರ ಜಲ ಶಕ್ತಿ ಸಚಿವರಿಗೆ ಡಿಕೆ ಶಿವಕುಮಾರ್ ಮನವಿ
ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಾದ ತುಂಗಭದ್ರಾ ಎಡದಂಡೆ ಕಾಲುವೆ, ಘಟಪ್ರಭಾ ಬಲದಂಡೆ ಪ್ರಮುಖ ಕಾಲುವೆ, ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಡಿ ಕಾಲುವೆ, ಮಲಪ್ರಭಾ ಕಾಲುವೆಗಳ ವಿಸ್ತರಣೆ, ನವೀಕರಣ, ಆಧುನೀಕರಣಗೊಳಿಸಲು (ERM) ಹಾಗೂ ಸೋಂತಿ ಏತ ನೀರಾವರಿ ಯೋಜನೆಗಳಿಗೆ ಅಗತ್ಯವಿರುವ ಅನುಮತಿ
ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಡಿ.ಕೆ. ಶಿವಕುಮಾರ್
ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ
2028ರ ಚುನಾವಣೆಗೆ ಸಜ್ಜಾಗುವಂತೆ ಪರಾಜಿತ ಅಭ್ಯರ್ಥಿಗಳಿಗೆ ಡಿಕೆ ಶಿವಕುಮಾರ್ ಸೂಚನೆ
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಕ್ಷೇತ್ರಗಳ ಪೈಕಿ ಸುಮಾರು 60 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳಿವೆ ಎಂದು ನಮ್ಮ ಆಂತರಿಕ ಸಮೀಕ್ಷೆಗಳು ವರದಿ ನೀಡಿವೆ. ಈ ಹಿನ್ನೆಲೆಯಲ್ಲಿ ಪರಾಜಿತ ಅಭ್ಯರ್ಥಿಗಳ ಕಷ್ಟ ಆಲಿಸಿ, ಮುಂದಿನ 2028ರ ಚುನಾವಣೆಗೆ ಸಜ್ಜಾಗಿ
ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯ ಇರುವವಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಲಿಂಗಾಯತ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಿದ್ದು, ಕರ್ನಾಟಕದ ಕೆಲವು ಭಾಗಗಳ ಮೇಲೆ ಪರಿಣಾಮ ಬೀರಿ ಮಳೆ ಸುರಿಯಬಹುದು ಎಂದು ಹೇಳಲಾಗಿದೆ. ಉತ್ತರ ಕನ್ನಡದಲ್ಲಿ
ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್ ಸ್ಥಗಿತ
ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೇ-ಕೇರ್ ಕಿಮೊಥೆರಪಿ ಕೇಂದ್ರ : ಆರೋಗ್ಯ ಸಚಿವ ದಿನೇಶ ಗುಂಡೂರಾವ್
ವಿಜಯಪುರ, : ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ-ಕೇರ್ ಕಿಮೊಥೆರಪಿಯನ್ನು ಆರಂಭಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡುರಾವ್ ಹೇಳಿದರು. ಶನಿವಾರ ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೊಥೆರಪಿ
ಕೇರಳದಲ್ಲಿ ಜಿಎಸ್ ಟಿ ಅಧಿಕಾರಿ ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಸೋದರಿ ಹಾಗೂ ತಾಯಿಯ ಜೊತೆ ಜಿಎಸ್ ಟಿ ಹೆಚ್ಚುವರಿ ಕಮಿಷನರ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಕೇರಳದ ಕೊಚ್ಚಿಯ ಮನೆಯೊಂದರಲ್ಲಿ ಪತ್ತೆಯಾಗಿದೆ. ಜಾರ್ಖಂಡ್ ಮೂಲದ 44 ವರ್ಷದ ಮನೀಶ್ ವಿಜಯ್ ಸುಂಕ ಇಲಾಖೆಯಲ್ಲಿ ಹೆಚ್ಚುವರಿ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಜಯ್,




