Menu

ರಾಜ್ಯದ ನಾನಾ ಕಡೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ರೇಡ್‌

ಬೆಂಗಳೂರು, ಬಾಗಲಕೋಟೆ, ರಾಯಚೂರು, ಬೆಳಗಾವಿ ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ನಿವಾಸ, ಕಚೇರಿಗಳಿಗೆ ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿಗಳ ಮನೆ, ಬೆಂಗಳೂರಿನಲ್ಲಿ ಬಿಬಿಎಂಪಿ ಎಇಇ ಮಾಧವ ರಾವ್ ಮನೆ ಮೇಲೆ ದಾಳಿ ನಡೆದಿದೆ. ಎಂಜಿನಿಯರಿಂಗ್ ವಿಭಾಗದ ಎಇಇ ಮಾಧವರಾವ್ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಾವಿ ನಗರದ ಅನಗೋಳದಲ್ಲಿರುವ,

ಮೈಕ್ರೊ ಫೈನಾನ್ಸ್ ಹಾವಳಿ ಕಡಿವಾಣಕ್ಕೆ ಸುಗ್ರಿವಾಜ್ಞೆ: ರಾಜ್ಯ ಸಚಿವ ಸಂಪುಟ ಅನಮೋದನೆ

ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳತಕ್ಕೆ ಕಡಿವಾಣ ಹಾಕಲು ಸುಗ್ರಿವಾಜ್ಞೆ ಜಾರಿಗೆ ತರಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳನ್ನು ಕಡಿವಾಣ ಹಾಕಲು ಹೊಸದಾಗಿ ಜಾರಿಗೆ ತರುವ ಮಸೂದೆಗೆ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಳಿಸಿ: ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಂಸದ ಸುಧಾಕರ್!

ಏಕಪಕ್ಷೀಯ ನಿರ್ಧಾರ ಕೈಗೊಳ್ಳುತ್ತಿರುವ ವಿಜಯೇಂದ್ರ ಅವರನ್ನು ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಸಂಸದ ಕೆ.ಸುಧಾಕರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ವಿಜಯೇಂದ್ರ ವಿರುದ್ಧ ಮೊದಲ ಬಾರಿ ಬಹಿರಂಗ ಹೇಳಿಕೆ ನೀಡುವ ಮೂಲಕ ಬಂಡಾಯ ಘೋಷಿಸಿದರು. ಅಲ್ಲದೇ ನಿಮ್ಮ ನಾಯಕತ್ವದಲ್ಲಿ ಕೋಲಾರ,

ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಸುರಕ್ಷತೆಗೆ ಪ್ರಧಾನಿ ಸೂಚನೆ: ಎಚ್.ಡಿ. ಕುಮಾರಸ್ವಾಮಿ

ಮೈಸೂರು: ಪ್ರಯಾಗ್ ರಾಜ್ ಕುಂಭಮೇಳದಲ್ಲಿ ನಡೆದಿರುವ ಕಾಲ್ತುಳಿತ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಗ್ಗೆ ಉತ್ತರ ಪ್ರದೇಶದ ಸರಕಾರಕ್ಕೆ ಪ್ರಧಾನಿಗಳು ಸೂಕ್ತ ನಿರ್ದೇಶನ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು

ಮುಂಬೈನಲ್ಲಿ ಇನ್ವೆಸ್ಟ್‌ ಕರ್ನಾಟಕ ರೋಡ್‌ಷೋ: ಉದ್ಯಮ ದಿಗ್ಗಜರ ಜೊತೆ ಸಚಿವ ಎಂ. ಬಿ. ಪಾಟೀಲ್‌ ಚರ್ಚೆ

ಬೆಂಗಳೂರಿನಲ್ಲಿ  ಮುಂದಿನ ತಿಂಗಳು (ಫೆಬ್ರವರಿ) ನಡೆಯಲಿರುವ ಇನ್ವೆಸ್ಟ್‌ ಕರ್ನಾಟಕ 2025 (ಜಾಗತಿಕ ಹೂಡಿಕೆದಾರರ ಸಮಾವೇಶ) -ದ ಪೂರ್ವಭಾವಿ ಸಿದ್ಧತೆಗಳ ಭಾಗವಾಗಿ ಮುಂಬೈನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಏರ್ಪಡಿಸಿದ್ದ ರೋಡ್‌ಷೋ ತನ್ನ ಉದ್ದೇಶ ಸಾಧನೆಯಲ್ಲಿ ಯಶಸ್ವಿಯಾಗಿದೆ. ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌

ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಜನವರಿ 28 : ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಶೇ. 10 ಕ್ಕೂ ಮೀರುವಂತೆ ಸೂಚನೆ ನೀಡಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಅನುಸಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ

ದೇವದಾಸಿ ಪದ್ಧತಿ ನಡೆದರೆ ಎಸ್ ಪಿ- ಡಿಸಿ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಿಎಂ ಎಚ್ಚರಿಕೆ

ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ನಡೆದ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ

ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲೆಕ್ಟ್ರಾನಿಕ್ ಬಿ-ಖಾತಾ ಅಭಿಯಾನ

ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಇತರ ನಗರ ಪ್ರದೇಶ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 30 ರಿಂದ 32 ಲಕ್ಷ ನಿವೇಶನ- ಅಸ್ತಿಗಳಿಗೆ ಯಾವುದೇ ಇ-ದಾಖಲೆ ಇಲ್ಲ. ಈ ಎಲ್ಲಾ ಆಸ್ತಿಗಳಿಗೂ ಒಂದು ಬಾರಿಯ ಪರಿಹಾರವಾಗಿ ಎಲೆಕ್ಟ್ರಾನಿಕ್ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವುದಾಗಿ

ಮುಂದಿನ ದಿನಗಳಲ್ಲಿ ಎಲ್ಲಾ ಸಂಸ್ಥೆಗಳಲ್ಲೂ ಕನ್ನಡ ಬಾವುಟ ಹಾರಾಟ ಕಡ್ಡಾಯ: ಡಿಕೆಶಿ

ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ  ಕಡ್ಡಾಯ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ನೂತನವಾಗಿ ಪ್ರತಿಷ್ಟಾಪಿಸಿರುವ ಭುವನೇಶ್ವರಿಯ ಪ್ರತಿಮೆ ಅನಾವರಣ

ಸಾಲ ಮನ್ನಾ ಮಾಡುತ್ತೇವೆಂದು ಮುಖ್ಯಮಂತ್ರಿ ಹೇಳಿದ್ದರಿಂದಲೇ ಸಮಸ್ಯೆ: ಅಶೋಕ ಆಕ್ರೋಶ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ