Menu

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಶಂಕು ಸ್ಥಾಪನೆ ನೆರವೇರಿಸಿದ ಸಿಎಂ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿವಿ, ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವ ವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿವಿ ಇದಾಗಿದೆ.

ಸತೀಶ್ ಜಾರಕಿಹೊಳಿಗೆ ಕೈ ಹೈಕಮಾಂಡ್ ನೋಟಿಸ್: ನಿರಾಕರಿಸಿದ ಸುರ್ಜೇವಾಲಾ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂಬಂಧ ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಹೈಕಮಾಂಡ್ ನೋಟಿಸ್ ನೀಡಿದೆ ಎಂಬ ವಿಚಾರವನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಿರಾಕರಿಸಿದ್ದಾರೆ. ನೋಟಿಸ್ ನೀಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರು

ಕೆಎಎಸ್‌ ಎಕ್ಸಾಂ ಅವಾಂತರ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆರ್‌. ಅಶೋಕ್‌ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. 2023-24ನೇ ಸಾಲಿನ

ಜಾತಿಗಣತಿಯನ್ನು ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿದ್ದಾರೆ: ಆರ್.ಅಶೋಕ

ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್-ಸಚಿವ ಜಾರಕಿಹೊಳಿ

ಕಿಯೋನಿಕ್ಸ್ ವೆಂಡರ್ಸ್ ಬಿಲ್ ಬಾಕಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ತೀಕ್ಷ್ಣವಾಗಿ

ಜಾತಿಗಣತಿ ವರದಿ ಊಹಾಪೋಹದಿಂದ ವಿರೋಧಿಸುವುದು ಅನವಶ್ಯಕ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ: ಕೃಷ್ಣ ಭೈರೇಗೌಡ ವಿರುದ್ಧ ರಾಜ್ಯಪಾಲರಿಗೆ ದೂರು!

ಕಂದಾಯ ಇಲಾಖೆಯಲ್ಲಿ ಆಗಿರುವ ಭ್ರಷ್ಟಾಚಾರ ಹಾಗೂ ಅಶಿಸ್ತು ತೋರುತ್ತಿರುವ ಸಚಿವ ಕೃಷ್ಣ ಭೈರೇಗೌಡ ವಿರುದ್ಧ ತನಿಖೆ ನಡೆಸುವಂತೆ ಕೋರಿ ಆರ್ ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಹಾಗೂ ಸಚಿವ ಜಮೀರ್

390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ

ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ

ರಾಜ್ಯಕ್ಕೆ ಮತ್ತೆ ಮತ್ತೆ ತೆರಿಗೆ ಹಂಚಿಕೆ ಅನ್ಯಾಯ: ಬಿಜೆಪಿ ನಾಯಕರ ಮೌನಕ್ಕೆ ಸಿಎಂ ಆಕ್ರೋಶ

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ.  ರಾಜ್ಯವನ್ನೇ ಪ್ರೀತಿಸದವರು ದೇಶವನ್ನು ಹೇಗೆ ಪ್ರೀತಿಸಲು ಸಾಧ‍್ಯ ಎನ್ನುವುದನ್ನು ಬಿಜೆಪಿಯವರು ಹೇಳಬೇಕು

ಕೃಷಿ ಸಚಿವರ ಮನವಿಗೆ ಸ್ಪಂದನೆ: ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 50000 ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ