Menu

2028ಕ್ಕೆ ನಾನೇ ಸಿಎಂ ಅಭ್ಯರ್ಥಿ ಅಂದ್ರು ಸತೀಶ್‌ ಜಾರಕಿಹೊಳಿ

ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದು ಅವರನ್ನು ಬದಲಾಯಿಸುವ ಅವಶ್ಯಕತೆ ಬರಲ್ಲ. ಈ ಅವಧಿಗೆ ನಾನು ಸಿಎಂ ಆಗುವುದಿಲ್ಲ, 2028 ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ರಾಯಚೂರಿನ ನಿಜಲಿಂಗಪ್ಪ ಕಾಲೋನಿಯಲ್ಲಿರುವ ಸಚಿವ ಎನ್.ಎಸ್.ಬೋಸರಾಜು ಅವರ ನಿವಾ ಸದಲ್ಲಿ ಉಪಹಾರ ಸೇವಿಸಿ ಮಾತನಾಡಿದ ಅವರು, ಡಿಸಿಎಂ ಡಿಕೆಶಿ ಅವರನ್ನು ಬಿಟ್ಟು ರಹಸ್ಯ ಸಭೆಯನ್ನು ಮಾಡಿಲ್ಲ. ಅದು ರಹಸ್ಯ ಸಭೆಯಲ್ಲ, ಊಟದ ಸಭೆಯಾಗಿತ್ತು.

HMPV ಎದುರಿಸಲು ಸರ್ಕಾರ ಸನ್ನದ್ಧವಾಗಲಿ : ಆರ್‌. ಅಶೋಕ್‌

ಬೆಂಗಳೂರಿನಲ್ಲಿ ಎರಡು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆಮಾಡಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿಯರು ಮತ್ತು

ಫೆ. 10ರೊಳಗೆ ಖಾತಾ ನೀಡಿಕೆ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂ ಖಡಕ್‌ ಸೂಚನೆ

ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ  ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಖಡಕ್‌ ಸೂಚನೆ ನೀಡಿದ್ದಾರೆ. ಖಾತಾ ವಿಚಾರದಲ್ಲಿ  ಆಗುತ್ತಿರುವ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕು. ಇದಕ್ಕೆ

ಮಾರ್ಚ್ 1ರಿಂದ 16 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿದ್ದರಾಮಯ್ಯ

ಬೆಂಗಳೂರು: ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ

ರಾಜ್ಯದಲ್ಲಿ ಗಾಳಿಗೆ ತೆರಿಗೆ ಹಾಕುವ ದಿನ ದೂರ ಇಲ್ಲ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಅವರು ನಮ್ಮ ಆಡಳಿತದಲ್ಲಿ 40 % ಸರಕಾರ ಎಂದರಲ್ಲ ಆವಾಗ ಏನು ದಾಖಲೆ ಕೊಟ್ಟಿದ್ದರು. ಇದುವರೆಗೂ ದಾಖಲೆ ಕೊಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ

ರಾಜ್ಯದಲ್ಲಿ HMP ವೈರಸ್ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೈನಾ ದೇಶದಲ್ಲಿ

ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಉತ್ತಮ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾಸಗಿ ಆಸ್ಪತ್ರೆಗಳಿಗೆ ಸಿಎಂ ಸ್ಪಷ್ಟ ಸೂಚನೆ ನೀಡಿದರು. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಮತ್ತು ಸಿಬ್ಬಂದಿಗೆ

ರಾಜ್ಯದಲ್ಲಿ ಮೂರು ದಿನ ಕಾಡಲಿದೆ ಅತಿ ಶೀತಗಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತೀವ್ರವಾದ ಶೀತಗಾಳಿ ವ್ಯಾಪಿಸಲಿದ್ದು, ಉಷ್ಣಾಂಶ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್,

ಬಾಣಂತಿಯರ ಸರಣಿ ಸಾವು ಖಂಡಿಸಿ ಬಿಜೆಪಿ ಪ್ರತಿಭಟನೆ

ಶಿವಮೊಗ್ಗ: ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ರಾಜ್ಯಾದ್ಯಂತ ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಿಗುತ್ತಿದ್ದರೂ, ಜನಸಾಮಾನ್ಯರು

ನಿಮ್ಹಾನ್ಸ್ ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ: ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು, ಜನವರಿ. 3: ದೇಶದ ಅತ್ಯಂತ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ನಿಮ್ಹಾನ್ಸ್ ಆಸ್ಪತ್ರೆಗಿಂತಲೂ ಮಿಗಿಲಾಗಿದೆ. ಅತ್ಯಾಧುನಿಕ ಸಂಶೋಧನೆ, ಉನ್ನತ ಮಟ್ಟದ ಆರೈಕೆ, ಸಹಾನುಭೂತಿ, ಕಾಳಜಿಯನ್ನು ಒದಗಿಸುವ ಕೇಂದ್ರವಾಗಿದೆ. ಇದು ರೋಗಿಗಳಿಗೆ ಆಶ್ರಯತಾಣ, ಕುಟುಂಬಗಳಿಗೆ ಆಶಾಕಿರಣ. ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಅಕ್ಷಯಪಾತ್ರೆಯಂತಾಗಿದೆ