karnataka
ಸಾಲು ಮರದ ತಿಮ್ಮಕ್ಕ ನಿಧನಕ್ಕೆ ಸಿಎಂ ಸಂತಾಪ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ
ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಿ: ಮುಖ್ಯಮಂತ್ರಿ
ಬಿ.ಎಸ್.ವಿಶ್ವನಾಥ್ ಅವರ ಆದರ್ಶಗಳನ್ನು ಪಾಲಿಸುವ ಜೊತೆಗೆ ಯುವಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಯುವಜನತೆಗೆ ಕರೆ ನೀಡಿದರು. ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ
ಮೇಕೆದಾಟು ವಿರುದ್ಧ ತಮಿಳುನಾಡು ಅರ್ಜಿ ಸುಪ್ರೀಂನಿಂದ ವಜಾ, ನಮಗೆ ಸಿಕ್ಕ ನ್ಯಾಯ: ಡಿಕೆ ಶಿವಕುಮಾರ್
“ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ
“ನೀರಿನ ಹೆಜ್ಜೆ “ಪುಸ್ತಕ ಬಿಡುಗಡೆ ನಾಳೆ
ರಾಜ್ಯದ ಜಲ ಸಂಪನ್ಮೂಲ, ಇತಿಹಾಸ, ಸವಾಲುಗಳು ಹಾಗೂ ನೀರಿನ ನಿರ್ವಹಣೆಗೆ ಭವಿಷ್ಯದ ಯೋಜನೆಗಳು ಕುರಿತು ಬೆಳಕು ಚೆಲ್ಲುವ ಉದ್ದೇಶದೊಂದಿಗೆ ಕರ್ನಾಟಕದ ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ವಿರಚಿತ ನೀರಿನ ಹೆಜ್ಜೆ ಕೃತಿಯನ್ನು ಸಿಎಂ ಸಿದ್ದರಾಮಯ್ಯ 14-11-2025
ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ
“ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ
ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದೆ : ಸಿಎಂ ಸಿದ್ದರಾಮಯ್ಯ
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಢ್ಯದ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು
ದೆಹಲಿಯಲ್ಲಿ ಬಾಂಬ್ ಸ್ಪೋಟ: ರಾಜ್ಯದಲ್ಲಿ ಬಿಗಿ ಭದ್ರತೆಗೆ ಸಿಎಂ ಸೂಚನೆ
ದೆಹಲಿಯಲ್ಲಿ ಬಾಂಬ್ ಸ್ಪೋಟವಾಗಿರುವ ಹಿನ್ನೆಲೆಯಲ್ಲಿ ಇಡೀ ರಾಜ್ಯದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಲ್ಲಾ ಕೇಂದ್ರಗಳು, ಬೆಂಗಳೂರು ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣ ಸೇರಿದಂತೆ ಜನನಿಬಿಡ
ವೋಟ್ ಕದ್ದು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಹೆಚ್‌ಡಿಕೆ ಆರೋಪ
ರಾಜ್ಯದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವೋಟ್ ಚೋರಿ ಮೂಲಕವೇ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಎರ್ನಾಕುಲಂ – ಕೆಎಸ್ ಆರ್ ಬೆಂಗಳೂರು ನಡುವೆ
ನಿರ್ಲಜ್ಜತೆಯಿಂದ ಸುಳ್ಳು ಹೇಳುವಾಗ ಪ್ರಹ್ಲಾದ್ ಜೋಷಿ ಸಚಿವ ಸ್ಥಾನದ ಮರ್ಯಾದೆ ಗಮನಿಸಬೇಕಿತ್ತು: ಸಿಎಂ
ಇಂತಹದ್ದೊಂದು ಬೆತ್ತಲೆ ಸುಳ್ಳನ್ನು ನಿರ್ಲಜ್ಜತೆಯಿಂದ ರಾಜಾರೋಷವಾಗಿ ಹೇಳುವಾಗ ತಾನು ಹೊಂದಿರುವ ಸಚಿವ ಸ್ಥಾನದ ಮರ್ಯಾದೆಯನ್ನಾದರೂ ಜೋಷಿ ಗಮನದಲ್ಲಿಡಬೇಕಿತ್ತು. ಕರ್ನಾಟಕದಿಂದ ತೈಲ ಮಾರಾಟ ಕಂಪನಿಗಳಿಗೆ ಎಥೆನಾಲ್ ಹಂಚಿಕೆ ನಿಗದಿ ಆಗಿರುವುದು 116.30 ಕೋಟಿ ಲೀಟರ್ ಹೊರತು 47 ಕೋಟಿ ಲೀಟರ್ ಅಲ್ಲ. ಮುಖ್ಯಮಂತ್ರಿ
2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದೇ ಕ್ರಾಂತಿ: ಡಿಕೆ ಶಿವಕುಮಾರ್
“ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ, ಫೆಬ್ರವರಿಗೂ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ, ಅದು ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನವೆಂಬರ್




