Menu

ರಾಜ್ಯದಲ್ಲಿ ಹೆಚ್ಚುತ್ತಿದೆ ಡೆಂಗ್ಯು, ಬೆಂಗಳೂರಿನಲ್ಲಿ 2478 ಪ್ರಕರಣ

ರಾಜ್ಯದಲ್ಲಿ ಒಂದೆಡೆ ಮಳೆಯ ಅವಾಂತರವಾದರೆ ಮತ್ತೊಂದೆಡೆ ಡೆಂಗ್ಯು ಪ್ರಕರಣಗಳು ಹೆಚ್ಚುತ್ತಿದ್ದು, ಐದಕ್ಕಿಂತ ಹೆಚ್ಚು ಸಾವುಗಳಾಗಿವೆ. ಸತತ ಮಳೆಯಿಂದಾಗಿ ಡೆಂಗ್ಯು ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಕಳೆದ ಒಂಭತ್ತು ತಿಂಗಳಲ್ಲಿ 5093 ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನಲ್ಲಿ 2478 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ಹೊರತುಪಡಿಸಿ ರಾಜ್ಯಾದಾದ್ಯಂತ 2615 ಪ್ರಕರಣಗಳು ದೃಢಪಟ್ಟಿವೆ. ನಿಂತ ನೀರಲ್ಲಿ ಬೆಳೆಯುವ ಸೊಳ್ಳೆಯಿಂದ ಡೆಂಗ್ಯು ಹರಡುತ್ತದೆ. ಆರಂಭದಲ್ಲಿ ವಿಪರೀತ ಜ್ವರ, ತಲೆನೋವು, ಮೈಕೈ ನೋವು, ಕೀಲುನೋವು, ವಾಂತಿ- ವಾಕರಿಕೆ,

ರಾಜ್ಯದ ಪ್ರಮುಖ ಜಲಾಶಯಗಳು ಬಹುತೇಕ ಭರ್ತಿ: ಡ್ಯಾಂಗಳಲ್ಲಿ ಎಷ್ಟಿದೆ ನೀರು?

ಸತತ ಮಳೆಯ ಪರಿಣಾಮವಾಗಿ ಕರ್ನಾಟಕದ ಹಲವು ಪ್ರಮುಖ ಜಲಾಶಯಗಳು ತುಂಬಿ ಹರಿಯುವ ಹಂತಕ್ಕೇರಿವೆ. ಕೆಲವೆಡೆ ನೀರಿನ ಮಟ್ಟ ಗರಿಷ್ಠ ಮಟ್ಟ ತಲುಪಿದ್ದು, ಇನ್ನೂ ಕೆಲವು ಜಲಾಶಯಗಳು ಭರ್ತಿಯ ಅಂಚಿನಲ್ಲಿ ನಿಂತಿವೆ. ಸೆಪ್ಟೆಂಬರ್ 28ರ ಪರಿಸ್ಥಿತಿಯಂತೆ ರಾಜ್ಯದ ಕೆ.ಆರ್.ಎಸ್, ಕಬಿನಿ, ಆಲಮಟ್ಟಿ, ತುಂಗಭದ್ರಾ

ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯುವ ಲಕ್ಷಣಗಳಿವೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 4ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ವಿಶೇಷವಾಗಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆ

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: ಯಾವೆಲ್ಲ ಜಿಲ್ಲೆಗಳಿಗೆ ಅಲರ್ಟ್​?

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಶನಿವಾರದಿಂದ (ಸೆಪ್ಟೆಂಬರ್ 27) ಮುಂದಿನ ಮೂರು ದಿನಗಳಿಗೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಿದೆ. ಬಂಗಾಳ ಕೊಲ್ಲಿ ಹಾಗೂ ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತ

ಎಂಎಸ್‌ಪಿ ಅಡಿ ಉದ್ದು, ಹೆಸರು, ಸೂರ್ಯಕಾಂತಿ ಖರೀದಿಸಲು ಸಚಿವ ಶಿವಾನಂದ ಪಾಟೀಲ ಆದೇಶ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬುಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಆದೇಶ

ನಿಷ್ಕ್ರಿಯ ಅಬಕಾರಿ ಲೈಸೆನ್ಸ್‌ ಹರಾಜಿಗೆ ಸರ್ಕಾರ ಕ್ರಮ

ನಿಷ್ಕ್ರಿಯವಾಗಿರುವ ಅಬಕಾರಿ ಲೈಸೆನ್ಸ್‌ಗಳನ್ನು ಹರಾಜು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ರಾಜ್ಯದ ಬೊಕ್ಕಸಕ್ಕೆ 500 ಕೋಟಿ ರೂ. ಹೆಚ್ಚುವರಿ ಆದಾಯ ಸಂಗ್ರಹಿಸುವ ಗುರಿಯನ್ನು ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ರ ಬಜೆಟ್‌ನಲ್ಲಿ ಈ ಹರಾಜು ಯೋಜನೆ ಘೋಷಿಸಿದ್ದು, ಎಲೆಕ್ಟ್ರಾನಿಕ್ ಹರಾಜಿನ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ​ ಸಭೆ: ಪ್ರಮುಖ ನಿರ್ಣಯಗಳೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ (ಸೆಪ್ಟೆಂಬರ್‌ 25) ಸಚಿವ ಸಂಪುಟ ಸಭೆ ನಡೆಯಿತು. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವಿಚಾರದ ಚರ್ಚೆಯ ಜೊತೆಗೆ ಅನೇಕ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಆ ಕುರಿತಾದ ವಿವರ ಇಲ್ಲಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು

ಜಾತಿ ಗಣತಿಗೆ ಗೈರಾದ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಸಚಿವ ಹೆಚ್​.ಕೆ.ಪಾಟೀಲ್​

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಜಾತಿ ಗಣತಿ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿಗಳು ಸಮೀಕ್ಷೆ ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ

ಗಣತಿಗೆ ಆಧಾರ್ ಬಳಕೆಯ ಆಕ್ಷೇಪ: ಹೈಕೋರ್ಟ್‌ನಲ್ಲಿ ಗಂಭೀರ ಪ್ರಶ್ನೆಗಳು

ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಸಮೀಕ್ಷೆ (Caste Survey) ಕುರಿತ ವಿಚಾರಣೆ ಹೈಕೋರ್ಟ್‌ನಲ್ಲಿ ಎರಡನೇ ದಿನವೂ ಜೋರಾಗಿ ನಡೆಯಿತು. ವಿಚಾರಣೆಯ ವೇಳೆ ನ್ಯಾಯಾಲಯವು ಹಲವು ಪ್ರಶ್ನೆಗಳನ್ನು ಎತ್ತಿ, ಗುರುವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಕೋರ್ಟ್ ಗಮನ ಸೆಳೆದ ಪ್ರಮುಖ ವಿಷಯವೆಂದರೆ, ಸಮೀಕ್ಷೆಗೆ ಆಧಾರ್ ನಂಬರ್‌ನ್ನು

39 ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿಗಮ-ಮಂಡಳಿ ಸ್ಥಾನ

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ, ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬಿಹಾರ ಪ್ರವಾಸದಲ್ಲಿರುವ ಸಂದರ್ಭದಲ್ಲಿ ಈ ಪಟ್ಟಿ ಬಿಡುಗಡೆಯಾಗಿದೆ.