Karnatakak CM post
ರಾಜ್ಯ ನಾಯಕತ್ವ ಗೊಂದಲ ಹೈಕಮಾಂಡ್‌ನದಲ್ಲ, ಲೋಕಲ್‌ನವರ ಸೃಷ್ಟಿ: ಮಲ್ಲಿಕಾರ್ಜುನ ಖರ್ಗೆ
ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಕಾಂಗ್ರೆಸ್ ಹೈಕಮಾಂಡ್ ಸೃಷ್ಟಿ ಮಾಡಿಲ್ಲ, ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಹೀಗಾಗಿ ಸ್ಥಳೀಯ ನಾಯಕರೇ ಅದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್ ಅಂದ್ರೆ ಹೇಗೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಿಎಂ-ಡಿಸಿಎಂ ಬಣದ ನಾಯಕರು ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಕದನವನ್ನೂ ಜೀವಂತವಾಗಿಟ್ಟಿದ್ದಾರೆ. ನಾನೇ 5 ವರ್ಷ ಸಿಎಂ, ಎರಡೂವರೆ ವರ್ಷಕ್ಕೆ ನಾಯಕತ್ವ ಬದಲಾಗುತ್ತೆ ಅಂತ ಎಲ್ಲೂ ಒಪ್ಪಂದ ಆಗಿಲ್ಲ.


