Karnatakaka news
ಎಲ್ಲರಿಗೂ ಒಳಿತಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ: ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಕೆ ಶಿವಕುಮಾರ್
“ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ದೇವರಲ್ಲಿ ಏನು ಪ್ರಾರ್ಥನೆ ಮಾಡಿದ್ದೀರಿ ಎಂದು ಕೇಳಿದಾಗ, “ಭಕ್ತ ಹಾಗೂ ಭಗವಂತನಿಗೆ ವ್ಯವಹಾರ ನಡೆಯುವ ಸ್ಥಳ ದೇವಸ್ಥಾನ. ಏನೇ ಕೇಳಿಕೊಂಡರು ಅದು


