Menu

ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು: ಮುಖ್ಯಮಂತ್ರಿ ಘೋಷಣೆ

ಮಹಾತ್ಮಗಾಂಧಿ ಹೆಸರು ಕೇಳಿದರೆ ಇವರಿಗೆ ಆಗಲ್ಲ. ದುರುದ್ದೇಶದಿಂದ ಮನ್ ರೇಗಾ ಹೆಸರು ಬದಲಾವಣೆ ಮಾಡಿ ‘ವಿಬಿ ಜೀ ರಾಮ್ ಜೀ’ ಜಾರಿ ಮಾಡಿದ್ದಾರೆ. ನಾವು ರಾಜ್ಯದಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ “ಮನರೇಗಾ ಬಚಾವೋ ” ಆಂದೋಲನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ  ಸಿಎಂ, ಮನ್ ರೇಗಾ ಯೋಜನೆಯಲ್ಲಿ ರಾಮ ಅನ್ನೋ ಹೆಸರು ಬರುವ ರೀತಿ ಯೋಜನೆ ಮಾಡಿದ್ದಾರೆ.