Menu

ಫೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಖುದ್ದು ಹಾಜರಾಗಲು ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಆದೇಶ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ ೧ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಕುರಿತು ಪೊಲೀಸರು ಸಲ್ಲಿಸಿದ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಸೇರಿದಂತೆ ಪ್ರಕರಣ ನಾಲ್ವರು ಆರೋಪಿಗಳು ವಿಚಾರಣೆ ವೇಳೆ ಖುದ್ದು ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿ ನೇಮಕಾತಿಗೆ ಸಿಎಂ ಸೂಚನೆ

ಬೆಂಗಳೂರು ಜ9: ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಲು ಮತ್ತು ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ