Menu

ಯಾರೇ ವಿಭಜಿಸಲು ಪ್ರಯತ್ನಿಸಿದರೂ ಬ್ಯಾರಿಗಳು ಅಸ್ಮಿತೆ, ಒಗ್ಗಟ್ಟು ಉಳಿಸಿಕೊಂಡು ಹೋಗಬೇಕು: ಸಿಎಂ 

ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬ್ಯಾರಿಸ್ ಸೆಂಟ್ರಲ್ ಕಮಿಟಿ ಬೆಂಗಳೂರು  ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದಬೃಹತ್ ಬ್ಯಾರಿ ಕೂಟ -2026 ಉದ್ಘಾಟಿಸಿ ಮಾತನಾಡಿದರು.  ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನವನ್ನು ಉಳಿಸಿಕೊಂಡಿರುವುದು ಮುಖ್ಯ ಎಂದರು. ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ.