Menu

ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್, ವಿದೇಶಿ ಹಡಗುಗಳ ತೀವ್ರ ತಪಾಸಣೆ , ಆಳ ಮೀನುಗಾರಿಕೆಗೆ ತಡೆ

ಉಗ್ರರ ತಾಣಗಳ ಮೇಲೆ ಭಾರತದ ವಾಯುಪಡೆ ದಾಳಿ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಬಳಿಕ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಪ್ರಮುಖ ನಗರಗಳು, ಬಂದರು, ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅದೇ ರೀತಿ ರಾಜ್ಯದ ಕರಾವಳಿಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿದೆ. ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದೆ. ಕಾರವಾರದ ಬಂದರಿಗೆ ಆಮಿಸುವ ವಿದೇಶಗಳ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ