Karwar Super specialty hospital
ಮುಂದಿನ ಆಯವ್ಯಯದಲ್ಲಿ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು: ಸಿಎಂ ಸಿದ್ದರಾಮಯ್ಯ
ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದ್ದಾರೆ. ಕಾರವಾರದಲ್ಲಿ ಜಿಲ್ಲಾ ಪಂಚಾಯತ್ , ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಲೋಕೋಪಯೋಗಿ ಇಲಾಖೆ ಆಯೋಜಿಸಿದ್ದ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸುವ ಉದ್ದೇಶದಿಂದ ನಮ್ಮ


