Menu
12

ನೌಕಾನೆಲೆ ಮಾಹಿತಿ ಪಾಕ್ ಗೆ ರವಾನೆ: ಕಾರವಾರದ ಇಬ್ಬರ ಬಂಧನ

ಕಾರವಾರ: ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿರುವ ಆರೋಪದಡಿ ಮಂಗಳವಾರ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಅಂಕೋಲಾ ತಾಲೂಕಿನ ಅಕ್ಷಯ ನಾಯ್ಕ ಹಾಗೂ ಕಾರವಾರ ತಾಲೂಕಿನ ಮುದಗಾದ ವೇತನ ತಾಂಡೇಲ ಬಂಧಿತ ಆರೋಪಿಗಳಾಗಿದ್ದಾರೆ. ಸೋಮವಾರವೇ ಕಾರವಾರದಲ್ಲಿ ಬೀಡು ಬಿಟ್ಟಿದ್ದ ಹೈದರಾಬಾದಿನಿಂದ ಬಂದ ಎನ್ಐಎ ಅಧಿಕಾರಿಗಳ ತಂಡವು ರಾತ್ರಿಯವರೆಗೂ ನಗರ ಪೊಲೀಸ್ ಠಾಣೆಯಲ್ಲಿ ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿದ್ದರು. ಕಾರವಾರದಲ್ಲಿಯೇ ತಂಗಿದ್ದ ಅವರು ಮಂಗಳವಾರ