Menu

ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಅಧಿಕಾರಿಗಳು ಮತ್ತು ಸಿಬ್ಬಂದಿ ಜನ ಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ಜನರನ್ನು ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಜನರನ್ನು ಕಚೇರಿಗಳಿಗೆ ಅಲೆದಾಡಿಸುವುದು ಅಕ್ಷಮ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಿಎಂ, ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು ಎನ್ನುವ ಸೂಚನೆ ನೀಡಿದ್ದೆ. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಿ ಎಂದು  ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.