Menu

ಕೆಂಗೇರಿ ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ, ರೈಲು ಸಂಚಾರ ವ್ಯತ್ಯಯ

ಬೆಂಗಳೂರಿನ ಕೆಂಗೇರಿ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬರು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರಿಂದಾಗಿ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಕೆಲಕಾಲ ವ್ಯತ್ಯಯಗೊಂಡಿತು. ಮೈಸೂರು ರಸ್ತೆ–ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರಿಂದ ರೈಲುಗಳು ವೈಟ್‌ಫೀಲ್ಡ್​​ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ ಶಾಂತಗೌಡ (25) ಆತ್ಮಹತ್ಯೆ ಮಾಡಿಕೊಂಡವರು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು