Menu

ಮೆದುಳು ತಿನ್ನುವ ಸೋಂಕು ಹೆಚ್ಚಳ: ಶಬರಿಮಲೆ ಯಾತ್ರಿಗಳು ಮೂಗಿಗೆ ನೀರು ತಾಗದಂತೆ ಎಚ್ಚರ ವಹಿಸಿ

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚುತ್ತಿದ್ದು, ಆತಂಕ ಸೃಷ್ಟಿಯಾಗಿದೆ. ಶಬರಿಮಲೆಯಾತ್ರೆ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ತಾಕದಂತೆ ಎಚ್ಚರಿಕೆ ವಹಿಸಬೇಕು ಎಂದು ಕೇರಳ ಸರ್ಕಾರವು ಬಿಡುಗಡೆ ಮಾಡಿರುವ ಆರೋಗ್ಯ ಮಾರ್ಗದರ್ಶಿಯಲ್ಲಿ ಎಚ್ಚರಿಕೆ ನೀಡಿದೆ. ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ತಾಕದಂತೆ ಎಚ್ಚರಿಕೆ ವಹಿಸಬೇಕು, ಯಾತ್ರೆಗೆ ಬರುವಾಗ ನಿಮ್ಮೊಂದಿಗೆ ಅಗತ್ಯ ಔಷಧ ತರಬೇಕು, ಯಾತ್ರೆ ಆರಂಭಕ್ಕೂ ಕೆಲವು ದಿನಗಳ ಮೊದಲೇ ವಾಕಿಂಗ್‌ ಅಭ್ಯಾಸ ಮಾಡಿಕೊಂಡು