Menu

ಕೋಗಿಲು ಪ್ರಕರಣ: ಅಕ್ರಮ ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲವೆಂದ ಡಿಕೆ ಶಿವಕುಮಾರ್

“ಅಕ್ರಮವಾಗಿ ಒತ್ತುವರಿ ಯಾರೂ ಮಾಡಬಾರದು.  ಅಕ್ರಮವಾಗಿ ಸರ್ಕಾರಿ ಜಾಗ ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ. ಯಾವ ರೀತಿಯಲ್ಲೂ ಓಲೈಕೆ ರಾಜಕಾರಣ ಮಾಡುವಂತಹ ಪ್ರಶ್ನೆ ಬರುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಮುಸ್ಲಿಂಮರ ಓಲೈಕೆ ಮಾಡಲಾಗುತ್ತಿದೆ ಎನ್ನುವ ಪ್ರತಿಪಕ್ಷದ ಟೀಕೆಗಳ ಬಗ್ಗೆ ಕೇಳಿದಾಗ, “ಯಾರನ್ನೂ ಓಲೈಕೆ ಮಾಡುತ್ತಿಲ್ಲ. ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರು ಹಣ