Sunday, September 13, 2026
Menu

ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ ಕೇರಳ ವಿದ್ಯಾರ್ಥಿನಿ ನಾಪತ್ತೆ

ಚಿಕ್ಕಮಗಳೂರು ಮುಳ್ಳಯ್ಯನಗಿರಿ ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ  ನಾಪತ್ತೆಯಾಗಿದ್ದಾಳೆ. 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನ ನಾಪತ್ತೆಯಾಗಿರುವಾಕೆ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ ಚಂದ್ರದ್ರೋಣ ಸಾಲಿನಲ್ಲಿ ವೀಕ್ಷಣೆಗೆ ತೆರಳಿದ್ದರು. ಕತ್ತಲಾದಾಗ ಶ್ರೀನಂದನ ನಾಪತ್ತೆಯಾಗಿದ್ದಾಳೆ. ಜೊತೆಗಿದ್ದವರು ಹುಡುಕಾಡಿದರೂ ಪತ್ತೆಯಾಗಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕದ 30ಕ್ಕೂ ಹೆಚ್ಚು ಸಿಬ್ಬಂದಿ