Kerala Techie
ಆರೆಸ್ಸೆಸ್ ಕಾರ್ಯಕರ್ತರಿಂದ ಲೈಂಗಿಕ ಕಿರುಕುಳ: ಕೇರಳದ ಟೆಕ್ಕಿ ಸುಸೈಡ್
ಕೇರಳದ ತಿರುವನಂತಪುರದಲ್ಲಿ ಆರೆಸ್ಸೆಸ್ ಕಾರ್ಯಕರ್ತರ ನಿರಂತರ ಲೈಂಗಿಕ ಕಿರುಕುಳದಿಂದ ಬೇಸತ್ತ ಟೆಕ್ಕಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಡ್ಜ್ ವೊಂದರಲ್ಲಿ ಟೆಕ್ಕಿ ಆನಂದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇನ್ ಸ್ಟಾಗ್ರಾಂ ನಲ್ಲಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಆರೆಸ್ಸೆಸ್ ಸದಸ್ಯರು ತನಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ್ದಾರೆ. ಬಾಲ್ಯದಿಂದಲೂ ತಾನು ದೌರ್ಜ್ಯನ್ಯಕ್ಕೊಳಗಾಗಿದ್ದು, ಮಾನಸಿಕವಾಗಿ ನೊಂದಿದ್ದಾಗಿ ಬರೆದಿದ್ದಾರೆ. ಈ ಪ್ರಕರಣ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮಕ್ಕಳ ಸುರಕ್ಷತೆ


